ಅ.28ರಂದು ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮ

download
Published on

ಮೈಸೂರು: 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಅ.28ರಂದು ಬೆಳಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ.


ಕನ್ನಡ ನಾಡ ನುಡಿಯನ್ನು ಸಾರುವ ನಾಡಗೀತೆಯಾದ ಜಯ ಭಾರತ ಜನನಿಯ ತನುಜಾತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿದ್ಯಾಚೇತನ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಗೀತೆಗಳನ್ನು ಬೆಳಗ್ಗೆ 11ಕ್ಕೆ ಏಕಕಾಲದಲ್ಲಿ ಹಾಡಲಾಗುತ್ತದೆ.

ನಂತರ ಕನ್ನಡ ನಾಡ ನುಡಿಯ ಹಿರಿಮೆಯನ್ನು ಸಾರುವ ಕನ್ನಡ ಗೀತೆಗಳ ಗಾಯನ ಸಂದರ್ಭಾನುಸಾರ ಮುಂದುವರಿಯಲಿದೆ. ಹಾಡುಗಳ ಸಾಹಿತ್ಯ ಹಾಗೂ ದಾಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾಗಿದೆ.


ಕಾರ್ಯಕ್ರಮದಲ್ಲಿ ಭಾಗವಹಿಸುವವರನ್ನು ನೋಂದಾಯಿಸಿ ಭಾಗವಹಿಸಿದವರಿಗೆ ಸ್ವಯಂ ಚಾಲಿತ ಆನ್‌ಲೈನ್ ಪ್ರಮಾಣ ಪತ್ರ ನೀಡಲು ಉದ್ದೇಶಿಸಲಾಗಿದೆ. https://kannadasiri.karnataka.gov.in/kkg/public/ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net