ಅ. 28ರಂದು ಸಾರ್ವಜನಿಕ ಸಭೆ

Published on

ಚಾಮರಾಜನಗರ: ರಸ್ತೆ ಅಗಲೀಕರಣಕ್ಕಾಗಿ ರಾಷ್ಟ್ರೀಯ ಹೆದ್ದಾರಿ-766ರಲ್ಲಿ ವಿವಿಧ ಜಾತಿಯ 137 ಮರಗಳನ್ನು ತೆರವುಗೊಳಿಸುವ ಸಂಬಂಧ ಸಾರ್ವಜನಿಕರಿಂದ ಆಕ್ಷೇಪಣೆ ಅಹವಾಲುಗಳನ್ನು ಸ್ವೀಕರಿಸಿ ಚರ್ಚೆ ನಡೆಸಲು ಅ.28ರಂದು ಬೆಳಗ್ಗೆ 11 ಗಂಟೆಗೆ ಗುಂಡ್ಲುಪೇಟೆ ಪಟ್ಟಣದ ಮೈಸೂರು-ನೀಲಗಿರಿ ರಸ್ತೆಯಲ್ಲಿರುವ ಜೆ.ಪಿ ಗ್ರ್ಯಾಂಡ್ ಇನ್ ಹೋಟೆಲ್ ಪಕ್ಕದಲ್ಲಿರುವ ಖಾಲಿ ನಿವೇಶನದಲ್ಲಿ ಸಾರ್ವಜನಿಕ ಸಭೆ ಏರ್ಪಡಿಸಲಾಗಿದೆ.

ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ವೃಂದದವರು ಹಾಗೂ ಅರಣ್ಯ ಇಲಾಖಾ ಅಧಿಕಾರಿಗಳು ಹಾಜರಿದ್ದು ಮರಗಳ ತೆರವು ಸಂಬಂಧ ಸಾರ್ವಜನಿಕರಿಂದ ಆಕ್ಷೇಪಣೆ, ಅಹವಾಲುಗಳನ್ನು ಸ್ವೀಕರಿಸಿ ಚರ್ಚೆ ನಡೆಸಲಾಗುವುದು ಎಂದು ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net