ಅ.3ರಂದು ಭಾರತ್ ಜೋಡೋ ಪಾದಯಾತ್ರೆ ಪ್ರವೇಶ

27-pnp 1
Published on

ಪಾಂಡವಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಪಾದಯಾತ್ರೆ ಅ.3 ರಂದು ಮಂಡ್ಯ ಜಿಲ್ಲೆಯ ಶ್ರೀರಂಪಟ್ಟಣದ ಮೂಲಕ ತಾಲೂಕು ಪ್ರವೇಶಿಸುತ್ತಿದ್ದು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರ್‌ನಾಥ್ ಮನವಿ ಮಾಡಿದರು.


ರಾಜ್ಯದ 224 ತಾಲೂಕುಗಳ ಪೈಕಿ ಕೇವಲ 24 ತಾಲೂಕುಗಳಲ್ಲಿ ಭಾರತ್ ಜೋಡೋ ಯಾತ್ರೆ ಸಂಚರಿಸುತ್ತದೆ. ಅದರಲ್ಲಿ ಮಂಡ್ಯ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಸಂಚರಿಸುತ್ತಿರುವುದು ನಮ್ಮ ಭಾಗ್ಯ. ದೇಶದ ಇತಿಹಾಸದಲ್ಲಿ ಮಹಾತ್ಮಗಾಂಧಿ ಮತ್ತು ಶಂಕರಚಾರ್ಯರು ಅತಿ ಹೆಚ್ಚು ಪಾದಯಾತ್ರೆ ನಡೆಸಿದ್ದರು ಎಂದು ಕೇಳಿದ್ದೇವೆ. ಅದೇ ರೀತಿ ರಾಹುಲ್‌ಗಾಂಧಿ ಅವರು 3500 ಕಿ.ಮೀ ಪಾದಯಾತ್ರೆ ನಡೆಸುತ್ತಿದ್ದಾರೆ. ಇದೊಂದು ಐತಿಹಾಸಿಕ ಪಾದಯಾತ್ರೆಯಾಗಿದೆ. ಈ ಹಿನ್ನೆಲೆಯಲ್ಲಿ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳು ಸೇರಿದಂತೆ ಎಲ್ಲ ವರ್ಗದ ಮಹಿಳೆಯರನ್ನು ಪಾದಯಾತ್ರೆಗೆ ಕರೆತರಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಕೋರಿದರು.


ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಆಶಾ ಲವಕುಮಾರ್, ಶೋಭಾಕುಮಾರ್, ಪುರಸಭೆ ಸದಸ್ಯರಾದ ಜಯಲಕ್ಷ್ಮಮ್ಮ, ಜಯಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಮಹಿಳಾಧ್ಯಕ್ಷೆ ಅಂಜನಾ ಶ್ರೀಕಾಂತ್, ಕಿಸಾನ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸಿ.ಆರ್.ರಮೇಶ್, ಯುವ ಅಧ್ಯಕ್ಷ ಭರತ್ ಪಟೇಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೊನಗಾನಹಳ್ಳಿ ಕೃಷ್ಣೇಗೌಡ, ಯಶೋದಾಗೌಡ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net