ಅ.3ರಂದು ಭಾರತ್ ಜೋಡೋ ಯಾತ್ರೆ ಆಗಮನ

Published on

ಪಾಂಡವಪುರ: ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಅ.3ರಂದು ಜಿಲ್ಲೆಗೆ ಪ್ರವೇಶಿಸಲಿದ್ದು, ಪಟ್ಟಣದಲ್ಲಿ ಸಮಾವೇಶ ಆಯೋಜಿಸಲಾಗಿದೆ ಎಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ಸಮಿತಿ ಜಿಲ್ಲಾಧ್ಯಕ್ಷ ಸುರೇಶ್ ಕಂಠಿ ಹೇಳಿದರು.
ಶ್ರೀರಂಗಪಟ್ಟಣದ ಗಡಿ ಭಾಗ ನಗುವನಹಳ್ಳಿಗೆ ಅ.3ರಂದು ಯಾತ್ರೆ ಆಗಮಿಸಲಿದೆ. ಅಂದು ಪಾಂಡವಪುರ ಪಟ್ಟಣದ ಐದು ದೀಪಗಳ ವೃತ್ತದಲ್ಲಿ ಬೃಹತ್ ಸಭೆ ನಡೆಯಲಿದ್ದು, 15 ಸಾವಿರಕ್ಕೂ ಹೆಚ್ಚು ಜನ ಸೇರಲಿದ್ದಾರೆ. ಸಭೆಯ ನಂತರ ಪಟ್ಟಣದ ಹಾರೋಹಳ್ಳಿ ಬಳಿ ವಾಸ್ತವ್ಯ ಹೂಡಲಿದ್ದಾರೆ. ಸೆ.6 ರಂದು ತಾಲೂಕಿನ ಜಕ್ಕನಹಳ್ಳಿಯಲ್ಲಿ ಯುವಕರ ಜತೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ. ಬಳಿಕ ಯಾತ್ರೆ ನಾಗಮಂಗಲಕ್ಕೆ ತೆರಳಲಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ಬದುಕು ಕಟ್ಟಿಕೊಳ್ಳಲಾರದೆ ನರಳುತ್ತಿದ್ದಾರೆ. ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪಂಗಡದವರು ಸೇರಿದಂತೆ ಸಣ್ಣಪುಟ್ಟ ಸಮುದಾಯಗಳು ಉದ್ಯೋಗದಿಂದ ವಂಚಿತರಾಗಿದ್ದಾರೆ. ಈ ಎಲ್ಲದರ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್ ಪರಿಶಿಷ್ಟ ಜಾತಿ ತಾಲೂಕು ಅಧ್ಯಕ್ಷ ಅಂತನಹಳ್ಳಿ ಬಸವರಾಜು, ಕಿಸಾನ್ ಘಟಕದ ತಾಲೂಕು ಅಧ್ಯಕ್ಷ ಸಿ.ಆರ್.ರಮೇಶ್, ಟಿಎಪಿಸಿಎಂಎಸ್ ನಿರ್ದೇಶಕ ಚಿಕ್ಕಾಡೆ ಶ್ರೀಕಾಂತ್, ಕುರುಬರ ಸಂಘದ ತಾಲೂಕು ಅಧ್ಯಕ್ಷ ಹುಚ್ಚೇಗೌಡ, ದಯಾನಂದ, ಯುವ ಕಾಂಗ್ರೆಸ್ ಅಧ್ಯಕ್ಷ ಭರತ್ ಪಟೇಲ್, ಸಿ.ಎಂ.ಮಹೇಶ್, ಸಿದ್ದಲಿಂಗಯ್ಯ, ರಾಜ್ಯ ಸಮಿತಿ ಸದಸ್ಯರಾದ ಆನಂದ್, ಲವ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net