ಅ.6ರಿಂದ ದಸರಾ ಕುಸ್ತಿ ಪಂದ್ಯಾವಳಿ

21 TKE 1(1)web
Published on

ತರೀಕೆರೆ: ಪಟ್ಟಣದಲ್ಲಿ ಅ.6ರಿಂದ 8ರವರೆಗೆ ರಾಜ್ಯ ಮಟ್ಟದ ದಸರಾ ಕುಸ್ತಿ ಪಂದ್ಯಾವಳಿ ನಡೆಯಲಿದೆ ಎಂದು ಕುರುಬ ಸಮಾಜದ ಅಧ್ಯಕ್ಷ ಡಿ.ವಿ.ಪದ್ಮರಾಜ್ ಹೇಳಿದರು. ಪಟ್ಟಣದ ಬಯಲು ರಂಗಮಂದಿರ ಆವರಣದಲ್ಲಿ ದಸರಾ ಕುಸ್ತಿ ಪಂದ್ಯಾವಳಿ ಆಯೋಜಿಸುವ ಸಲುವಾಗಿ ಅಖಾಡ ಸಿದ್ಧಗೊಳಿಸಲು ಮಾಜಿ ಶಾಸಕ ಟಿ.ಎಚ್.ಶಿವಶಂಕರಪ್ಪ ಅವರೊಂದಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಮಾಜಿ ಪೈಲ್ವಾನ್ ಎಂ.ಮಂಜುನಾಥ್ ಅವರನ್ನು ಗುರು ರೇವಣಸಿದ್ದೇಶ್ವರ ಗರಡಿ ಕುಸ್ತಿ ಸಂಘದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಅವರ ಮುಂದಾಳತ್ವದಲ್ಲಿ ದಸರಾ ಕುಸ್ತಿ ಪಂದ್ಯಾವಳಿ ನಡೆಯಲಿದೆ. ಎರಡು ವರ್ಷ ಕರೊನಾ ಕಾರಣದಿಂದ ಸ್ಥಗಿತಗೊಳಿಸಲಾಗಿದ್ದ ಪಂದ್ಯಾವಳಿ ಈ ಬಾರಿ ಅದ್ದೂರಿಯಾಗಿ ಮರು ಚಾಲನೆ ಪಡೆಯಲಿದೆ. ರಾಜ್ಯದ ನಾನಾ ಭಾಗಗಳಿಂದ ಕುಸ್ತಿಪಟುಗಳು ಆಗಮಿಸಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net