

ಗುಂಡ್ಲುಪೇಟೆ: ಪಟ್ಟಣದಲ್ಲಿ ಅ.7ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಪ್ರತಿಯೊಂದು ಸಮುದಾಯವರು ಒಗ್ಗೂಡಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ಎಂ.ಎಸ್.ತನ್ಮಯಿ ಹೇಳಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ರಾಷ್ಟ್ರೀಯ ಹಬ್ಬಗಳ ಆಚರಣೆಯ ವತಿಯಿಂದ ಏರ್ಪಡಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ವಾಲ್ಮೀಕಿ ಜಯಂತಿ ಆಚರಣೆಯನ್ನು ತಾಲೂಕು ಆಡಳಿತ ವತಿಯಿಂದ ಆಚರಿಸುವ ಮೂಲಕ ಸಭೆಯಲ್ಲಿ ಭಾಗವಹಿಸಿದ್ದ ಸದಸ್ಯರು ಅಭಿಪ್ರಾಯ, ಸಲಹೆಗಳನ್ನು ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬರೂ ಸಹಕರಿಸುವಂತೆ ಮನವಿ ಮಾಡಿದರು.
ಪುರಸಭೆ ಅಧ್ಯಕ್ಷ ಶಶಿಧರ್, ಉಪಾಧ್ಯಕ್ಷ ಶ್ರೀನಿವಾಸ್ ನಾಯಕ, ಮಾಜಿ ಉಪಾಧ್ಯಕ್ಷ ಸುರೇಶ್, ಸದಸ್ಯ ಪಿ.ಗಿರೀಶ್, ಮುಖಂಡ ಎನದನ್.ಮಲ್ಲೇಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ಮುಖ್ಯಾಧಿಕಾರಿ ಶರವಣ, ತಾಪಂ ಇಒ ಷಣ್ಮುಗಂ, ಸೆಸ್ಕ್ ಎಇಇ ಸಿದ್ದಲಿಂಗಪ್ಪ ಇದ್ದರು.