ಅ.೧೭ ರಂದು ಬಿಇಸಿ ಅಡಿಟೋರಿಯಂ ಹಾಲ್ ಉದ್ಘಾಟನೆ

bkt-14-1
ಬಾಗಲಕೋಟೆ ನಗರದ ಬಿವಿವಿ ಸಂಘದ ಮಿನಿ ಸಭಾಭವನದಲ್ಲಿ ಬಿವಿವಿ ಸಂಘದ ಕಾರ್ಯಾಧ್ಯಕ್ಷ, ಶಾಸಕ ವೀರಣ್ಣ ಚರಂತಿಮಠ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ ಇದ್ದರು.
Published on

ಬಾಗಲಕೋಟೆ: ಬಿವಿವಿ ಸಂಘದ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಬೃಹತ್ ಪ್ರಮಾಣದಲ್ಲಿ ನಿರ್ಮಿಸಲಾಗಿರುವ ಬಿಇಸಿ ಅಡಿಟೋರಿಯಂ ಹಾಲ್ ಉದ್ಘಾಟನೆ ಕಾರ್ಯಕ್ರಮ ಅ.೧೭ ರಂದು ಮಧ್ಯಾಹ್ನ ೧೨.೩೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷ, ಶಾಸಕ ವೀರಣ್ಣ ಚರಂತಿಮಠ ಹೇಳಿದರು.
ಆಂಧ್ರಪ್ರದೇಶ ಸರ್ಕಾರ ಹಣಕಾಸು ಸಚಿವ ಭಗನ್ ರಾಜೇಂದ್ರನಾಥ್ ಉದ್ಘಾಟಿಸಲಿದ್ದಾರೆ. ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ತಿರುಮಲ ತಿರುಪತಿ ಟ್ರಸ್ಟ್ ಚೆರ್ಮನ್ ವೈ.ವಿ.ಸುಬ್ಬಾರೆಡ್ಡಿ, ಕಾರ್ಯನಿರ್ವಾಹಕ ಅಧಿಕಾರಿ ಎ.ವಿ.ಧರ್ಮಾರೆಡ್ಡಿ ಮುಖ್ಯಅತಿಥಿಗಳಾಗಿ ಆಗಮಿಸಲಿದ್ದಾರೆ. ಬಿವಿವಿ ಸಂಘದ ಕಾರ್ಯಾಧ್ಯಕ್ಷ, ಶಾಸಕ ವೀರಣ್ಣ ಚರಂತಿಮಠ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ತಿರುಮಲದ ಜಮೀನು ಹಸ್ತಾಂತರ..
ತಿರುಮಲದಲ್ಲಿ ಯಾತ್ರಿ ನಿವಾಸ ನಿರ್ಮಿಸುವ ಕನಸು ಇತ್ತು. ಸಾಕಷ್ಟು ಪ್ರಯತ್ನ ಪಟ್ಟರು ಸಾಧ್ಯವಾಗಿರಲಿಲ್ಲ. ಅಲ್ಲಿನ ಸರ್ಕಾರಕ್ಕೆ ಜಮೀನು ನೀಡುವಂತೆ ಮನವಿ ಮಾಡಲಾಗಿತ್ತು. ಇದೀಗ ೮೫೦೦ ಚದುರು ಅಡಿ ಜಮೀನು ನೀಡಿದೆ. ಬಿಇಸಿ ಅಡಿಟೋರಿಯಂ ಹಾಲ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶ ಸರ್ಕಾರ ಹಣಕಾಸು ಸಚಿವ ಭಗನ್ ರಾಜೇಂದ್ರನಾಥ್ ಜಮೀನು ಹಸ್ತಾಂತರ ಮಾಡಿ ಹಕ್ಕು ಪತ್ರ ವಿತರಿಸಲಿದ್ದಾರೆ. ಶೀಘ್ರದಲ್ಲಿ ಅಲ್ಲಿಯೂ ೫೦ ಕೊಠಡಿ, ಸಭಾಭವನ, ಅಡುಗೆ ಕೋಣೆ ಸೇರಿದಂತೆ ಸುಸಜ್ಜಿತವಾದ ಯಾತ್ರಿ ನಿವಾಸ ನಿರ್ಮಿಸಲಾಗುವುದು. ನಮ್ಮ ಭಾಗದ ಭಕ್ತರಿಗೆ ಅನುಕೂಲವಾಗಲಿದೆ. ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ಭವನ ಉದ್ಘಾಟಿಸಲಿದ್ದಾರೆ ಎಂದು ಶಾಸಕ ವೀರಣ್ಣ ಚರಂತಿಮಠ ತಿಳಿಸಿದರು.

ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಬಿವಿವಿ ಸಂಘದ ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ (ಬೇವೂರ), ಶಾಲಾ-ಕಾಲೇಜು ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಗುರುಬಸವ ಸೂಳಿಭಾವಿ ಸೇರಿದಂತೆ ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net