

ಮಡಿಕೇರಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅ.೧೭ ರಂದು ರಾತ್ರಿ ೧ ಗಂಟೆ ೨೭ ನಿಮಿಷಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ ಪುಣ್ಯ ಕಾಲ ನೆರವೇರಲಿದೆ.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿರವರ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ಶಾಸಕ ಡಾ.ಮಂತರ್ ಗೌಡ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಭಾಗಮಂಡಲ ಗ್ರಾ.ಪಂ. ಅಧ್ಯಕ್ಷ ಎ.ಕಾಳನ ರವಿ ಇತರರು ಪಾಲ್ಗೊಳ್ಳಲಿದ್ದಾರೆ.
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತ ಎಚ್.ಬಸವರಾಜು, ಕೊಡಗು ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್, ತಹಶೀಲ್ದಾರ್ ಪಿ.ಸಿ.ಪ್ರವೀಣ್ ಕುಮಾರ್, ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್, ತಕ್ಕ ಮುಖ್ಯಸ್ಥರಾದ ಬಳ್ಳಡ್ಕ ಸಿ.ಅಪ್ಪಾಜಿ, ಕೋಡಿ.ಯು. ಮೋಟಯ್ಯ, ಸಿಬ್ಬಂದಿ ವರ್ಗದವರು ಇತರರು ಪಾಲ್ಗೊಳ್ಳಲಿದ್ದಾರೆ.