ಅಂಕಲಗಾಕ್ಕೆ ಸರ್ಕಾರಿ ಪಿಯು ಕಾಲೇಜು ಮಂಜೂರು

IMG-20220921-WA0094
Published on

ಕಲಬುರಗಿ: ಜೇವರ್ಗಿ ತಾಲೂಕಿನ ಅಂಕಲಗಾ ಗ್ರಾಮಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರು ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರು ಮಾಡಿದ್ದಾರೆ.
ಕೆಲ ತಿಂಗಳ ಹಿಂದೆ ಜಿಲ್ಲೆಗೆ ಆಗಮಿಸಿದ್ದ ಸಚಿವ ಬಿ.ಸಿ.ನಾಗೇಶ ಅವರನ್ನು ಅಂಕಲಗಾ ಗ್ರಾಮಕ್ಕೆ ಕರೆದುಕೊಂಡು ಹೋಗಿದ್ದ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಅವರು ಸ್ಥಳೀಯ ವಿದ್ಯಾರ್ಥಿಗಳ ಸಮಸ್ಯೆ ಕುರಿತು ಮನವರಿಕೆ ಮಾಡಿ, ಕಾಲೇಜು ಮಂಜೂರು ಮಾಡುವಂತೆ ಮನವಿ ಮಾಡಿದ್ದರು.
ಇದೀಗ ಮನವಿಗೆ ಸ್ಪಂದಿಸಿರುವ ಶಿಕ್ಷಣ ಸಚಿವರು ಅಂಕಲಗಾ ಗ್ರಾಮಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರು ಮಾಡಿ, ಮಂಗಳವಾರ ಆದೇಶ ಹೊರಡಿಸಿದ್ದಾರೆ. ಕಾಲೇಜು ಮಂಜೂರು ಆಗಿರುವುದಕ್ಕೆ ಜೇವರ್ಗಿ ಮಾಜಿ ಶಾಸಕ ದೊಡ್ಡಪ್ಪಗೌಡ ಅವರು ಸಚಿವ ಬಿ.ಸಿ.ನಾಗೇಶ ಮತ್ತು ರಾಜ್ಯ ಬಿಜೆಪಿ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net