ಅಂಗಡಿಗಳಿಗೆ ಬೀಗ ಹಾಕಿದ ಪಿಎಸ್​ಐ

27 RON 1 A
Published on

ರೋಣ: ಕರೊನಾ ಸೋಂಕು ಹರಡುವುದನ್ನು ತಡೆಯಲು ಶುಕ್ರವಾರದ ಲಾಕ್​ಡೌನ್​ಗೆ ಪಟ್ಟಣದಲ್ಲಿ ಅಭೂತಪೂರ್ವ ಬೆಂಬಲ ಸಿಕ್ಕಿದೆ. ದಿನಸಿ ವಸ್ತುಗಳನ್ನು ಖರೀದಿಸುವಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಅಂಗಡಿ ಮುಂಗಟ್ಟುಗಳನ್ನು ಪಿಎಸ್​ಐ ಪರಮೇಶ್ವರ ಕವಟಗಿ ಅವರೇ ಮುಂದೆ ನಿಂತು ಮುಚ್ಚಿಸಿದ್ದಾರೆ.

ಪ್ರತಿದಿನ ಬೆಳಗ್ಗೆ ಅಗತ್ಯ ವಸ್ತುಗಳ ಖರೀದಿಗೆ ಸಾರ್ವಜನಿಕರು ಒಮ್ಮೆಲೆ ಮುಗಿಬೀಳುತ್ತಿದ್ದು, ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಎಂದು ವ್ಯಾಪಾರಸ್ಥರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮೆಡಿಕಲ್ ಶಾಪ್, ದಿನಸಿ ಅಂಗಡಿಗಳು, ಹಾಲು-ಹಣ್ಣಿನ ಅಂಗಡಿಗಳ ಮುಂಭಾಗದಲ್ಲಿ ಗ್ರಾಹಕರ ಮಧ್ಯ ಕನಿಷ್ಠ 6 ಅಡಿ ಅಂತರವಿರುವಂತೆ ಮಾರ್ಕಿಂಗ್ ಮಾಡಿಸಿದ್ದಾರೆ. ನಿಯಮ ಪಾಲಿಸದಿರುವುದು ಕಂಡು ಬಂದ ಅಂಗಡಿಗಳಿಗೆ ಸ್ವತಃ ಪಿಎಸ್​ಐ ಅವರೇ ಬೀಗ ಜಡಿಯುತ್ತಿದ್ದಾರೆ.

ಮಾಸ್ಕ್ ಕಡ್ಡಾಯ: ಬಹುತೇಕ ಮಂದಿ ಮಾಸ್ಕ್ ಧರಿಸಿಯೇ ಅಗತ್ಯ ವಸ್ತುಗಳ ಖರೀದಿಗೆ ಬರುತ್ತಿದ್ದು, ಸೋಂಕು ಹರಡುವಿಕೆ ತಡೆಗೆ ಎಚ್ಚರಿಕೆ ವಹಿಸಿದ್ದಾರೆ. ಕೆಲವರು ಕೈಗವಸು ಧರಿಸಿ ಮಾರುಕಟ್ಟೆಗೆ ಬಂದಿದ್ದು ಕಂಡು ಬಂತು.

ತಂಪು ಪಾನೀಯ ವಿತರಣೆ: ಅಂಜುಮನ್ ಕಮಿಟಿ ಅಧ್ಯಕ್ಷ ಭಾವಾಸಾಬ್ ಬೆಟಗೇರಿ ಅವರು, ಪಟ್ಟಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್, ಆರೋಗ್ಯ ಇಲಾಖೆ ಹಾಗೂ ಪೌರ ಕಾರ್ವಿುಕರಿಗೆ ಮಜ್ಜಿಗೆ ಸೇರಿ ತಂಪು ಪಾನೀಯಗಳನ್ನು ವಿತರಿಸಿದರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net