ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ

Oplus_16777216
Oplus_16777216
Published on

ವಿರಾಜಪೇಟೆ: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕೊಟ್ಟೋಳಿ ಗ್ರಾಮದ ಆಶ್ರಯ ಕಾಲನಿ ವ್ಯಾಪ್ತಿಯಲ್ಲಿ 20 ಲಕ್ಷ ರೂ.ಅನುದಾನದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂಗನವಾಡಿ ಕಟ್ಟಡಕ್ಕೆ ಬುಧವಾರ ಶಾಸಕರೂ ಆದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಮಕ್ಕಳ ಕಲಿಕೆಗೆ ಅಂಗನವಾಡಿ ಕೇಂದ್ರಗಳು ಬುನಾದಿ ಆಗಿವೆ. ಇಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಅಂಗನವಾಡಿಯ ಸ್ಥಳೀಯ ಮಕ್ಕಳ ವಿದ್ಯಾರ್ಜನೆಗೆ ಪೂರಕವಾಗುವಂತಾಗಲಿ. ಶೀಘ್ರದಲ್ಲೇ ಅಂಗನವಾಡಿ ಕಾಮಗಾರಿ ಪೂರ್ಣಗೊಳ್ಳಲಿದ್ದು ಈ ಭಾಗದ ಚಿಕ್ಕ ಮಕ್ಕಳ ವಿದ್ಯಾರ್ಜನೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ವಲಯ ಕಾಂಗ್ರೆಸ್ ಅಧ್ಯಕ್ಷ ನಡಿಕೇರಿಯಂಡ ಮಹೇಶ್, ಪಂಚಾಯಿತಿ ಅಧ್ಯಕ್ಷ ಜೇಫ್ರಿ ಉತ್ತಪ್ಪ, ಕೆಡಿಪಿ ಸದಸ್ಯ ಮಾಳೆಟೀರ ಪ್ರಶಾಂತ್, ಪಂಚಾಯಿತಿ ಸದಸ್ಯರಾದ ಇಸ್ಮಾಯಿಲ್, ಪವಿತ್ರಾ, ಮುಖಂಡರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net