ಅಂಗನವಾಡಿ ಕಾರ್ಯಕರ್ತೆ ನೇಮಕ ರದ್ದು

anganavdi jalajeevan
Published on

ಜೇವರ್ಗಿ: ಸಮಪರ್ಕವಾಗಿ ಅಂಗನವಾಡಿ ಕಾರ್ಯಕರ್ತೆ ಹುದ್ದೆ ಕೆಲಸ ನಿರ್ವಹಿಸದೆ ಗುವಿವಿಯಲ್ಲಿ ಪದವಿ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ತಾಲೂಕಿನ ಮಲ್ಲಾ (ಬಿ) ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಸಂಗೀತಾ ಶರಣಪ್ಪ ಸೈದಾಪುರ ಅವರ ಗೌರವ ಸೇವೆಯ ನೇಮಕ ಮಾನ್ಯತೆ ರದ್ದುಪಡಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ.ಅಂಗನವಾಡಿ ಕೇಂದ್ರ-೨ ರಲ್ಲಿ ಸಂಗೀತಾ ಕಾರ್ಯನಿರ್ವಹಿಸುತ್ತಿದ್ದರು. ಅಲ್ಲದೆ ಜೇವರ್ಗಿಯ ಶಾಂತಲಾ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಪ್ರಮಾಣ ಪತ್ರ ಪಡೆದು ಪದವಿ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡಿದ್ದ ಬಗ್ಗೆ ಅಧಿಕಾರಿಗಳು ವರದಿ ನೀಡಿದ್ದರಿಂದ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net