ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

15-pnp 3
Published on

ಪಾಂಡವಪುರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಂಗನವಾಡಿ ಕಾರ್ಯಕರ್ತೆಯರು ಪಟ್ಟಣದ ತಾಲೂಕು ಕಚೇರಿ ಮುತ್ತಿಗೆ ಹಾಕಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ. ಹಾಗೂ ಸಹಾಯಕಿಯರಿಗೆ 10 ಸಾವಿರ ರೂ. ಗೌರವಧನ, ನಿವೃತ್ತರಿಗೆ 3 ಲಕ್ಷ ರೂ. ಮತ್ತು ಗ್ರಾಚ್ಯುಟಿ ಸೌಲಭ್ಯ ನೀಡಲು ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು. ಶಿಶುಪಾಲನಾ ಕೇಂದ್ರಗಳು ಮತ್ತು ಪೂರ್ವ ಪ್ರಾಥಮಿಕ ತರಗತಿಗಳ ಆರಂಭದ ಆದೇಶ ಹಿಂಪಡೆದು ಅಂಗನವಾಡಿ ಕೇಂದ್ರಗಳಲ್ಲಿಯೇ ಶಾಲಾ ಪೂರ್ವ ತರಗತಿ ನಡೆಸಲು ವಿಶೇಷ ಸವಲತ್ತು ಒದಗಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರುಕ್ಮಿಣಿ, ಮೇರಿ, ಚಂದ್ರಕಲಾ, ಕೆ.ಶೈಲಾ, ಎಚ್.ಟಿ.ಮಂಜುಳಾ, ಟಿ.ವಿ.ಶಾರದಾ, ಕೆ.ಎಸ್.ಹರಿಣಿ, ಎಚ್.ಕೆ.ಪವಿತ್ರಾ, ಎಸ್.ಕೆ.ಉಷಾದೇವಿ, ಕೆ.ಬಿ.ಸುವರ್ಣ, ರಾಧಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net