ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯ

12,KHH-1P
Published on

ಕಾನಹೊಸಹಳ್ಳಿ: ಕ್ಷೇತ್ರದಲ್ಲಿನ ಪ್ರತಿಯೊಂದು ಅಂಗನವಾಡಿ ಕೇಂದ್ರಗಳಿಗೆ ಉತ್ತಮ ಕಟ್ಟಡ ನಿರ್ಮಿಸುವ ಮೂಲಕ ಅಗತ್ಯ ಸೌಕರ್ಯ ಕಲ್ಪಿಸುವ ಉದ್ದೇಶ ಹೊಂದಿರುವುದಾಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ತಿಳಿಸಿದರು.

ಕಾಟ್ರಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಬುಧವಾರ ಮಾತನಾಡಿದರು. ಮಕ್ಕಳ ಕಲಿಕಾ ಕೇಂದ್ರಗಳಲ್ಲಿ ಪರಿಸರ ಉತ್ತಮವಾಗಿರಬೇಕು. ಗುಣಮಟ್ಟದ ಕಟ್ಟಡ ಜತೆಗೆ ಪೌಷ್ಟಿಕಾಂಶಯುಕ್ತ ಆಹಾರ ನೀಡುವ ಸರ್ಕಾರದ ಯೋಜನೆ ಪರಿಣಾಮಕಾರಿ ತಲುಪಿಸಬೇಕು. ಗ್ರಾಮಗಳ ಸ್ವಚ್ಛತೆಗೆ ಗ್ರಾಪಂ ಅಧಿಕಾರಿಗಳು ಗಮನ ನೀಡಬೇಕು. ಒಳಚರಂಡಿ, ಸಿಸಿ ರಸ್ತೆ ನಿರ್ಮಿಸಲು ಆದ್ಯತೆ ನೀಡುವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net