ಅಂಗನವಾಡಿಗಳಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಸಿ

15 ckm 6
ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಉಜಿನಿ ಚಾಮುಂಡೇಶ್ವರಿ ಯುವಕ ಸಂಘದ ರಂಗಮAದಿರದಲ್ಲಿ ಏರ್ಪಡಿಸಲಾಗಿದ್ದ ಪೋಷಣ್ ಅಭಿಯಾನ ಯೋಜನೆಯಡಿ ರಾಷ್ಟಿçÃಯ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾರ್ಯಕರ್ತೆಯರು.
Published on

ಚಿಕ್ಕಮಗಳೂರು: ಶಾಲಾ ಪೂರ್ವ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯೆಯ ಜೊತೆಗೆ ವಿನಯ, ಸಂಸ್ಕೃತಿ, ಸಂಸ್ಕಾರವನ್ನು ಬೆಳೆಸುವುದು ಅಗತ್ಯ ಎಂದು ಉಜಿನಿ ಬನ್ನಿ ಕಾಳಿಕಾಂಭ ದೇವಸ್ಥಾನದ ಧರ್ಮಾಧಿಕಾರಿ ಗೋಪಾಲಗೌಡ ಕರೆ ನೀಡಿದರು.

ತಾಲೂಕಿನ ಹೊಸಪೇಟೆ ಉಜಿನಿ ಚಾಮುಂಡೇಶ್ವರಿ ಯುವಕ ಸಂಘದ ರಂಗಮAದಿರದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಪ್ರಚಾರ ಇಲಾಖೆ, ಆರೋಗ್ಯ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ತೋಟಗಾರಿಕೆ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ, ಬಿದರೆ ಗ್ರಾಪಂ ಹಾಗೂ ಶಿಶು ಅಭಿವೃದ್ಧಿ ಯೋಜನೆ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಪೋಷಣ್ ಅಭಿಯಾನ ಯೋಜನೆಯಡಿ ರಾಷ್ಟಿçÃಯ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಬೆಳವಣಿಗೆಯಲ್ಲಿ ತಾಯಿಯ ಪಾತ್ರ ಬಹಳ ಮಹತ್ವವಾಗಿದೆ. ಉತ್ತಮ ಸಂಸ್ಕಾರವAತ ಮಗು ಮುಂದೆ ದೇಶಕ್ಕೆ ಅಪಾರವಾದ ಕೊಡುಗೆ ನೀಡುತ್ತದೆ ಎಂದು ಕಿವಿಮಾತು ಹೇಳಿದರು.

ಶಿರವಾಸೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಮತ ಮಾತನಾಡಿ, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಆರೋಗ್ಯವಾಗಿರಬೇಕಾದರೆ ಪೌಷ್ಠಿಕ ಆಹಾರ ಸೇವನೆ ಅಗತ್ಯ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್ ವೈ ಆಲದಾರ್ತಿ, ನಿರೂಪಣಾಧಿಕಾರಿ ಸಂತೋಷ್.ಡಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಂಗನಾಥ್.ಸಿ, ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ರೂಪಾಕುಮಾರಿ., ಗ್ರಾಪಂ ಉಪಾಧ್ಯಕ್ಷೆ ರಜತಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net