ಅಂಗವಿಕಲ ಮಕ್ಕಳನ್ನು ಮುಖ್ಯವಾಹಿನಿಗೆ ತನ್ನಿ

Protest
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.64904743, 0.59271413);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 39;
Published on

ಚಿತ್ರದುರ್ಗ: ಜಿಲ್ಲೆಯ ಸಾವಿರಾರು ಅಂಗವಿಕಲ ಮಕ್ಕಳು ಶಿಕ್ಷಣ ಹಾಗೂ ಹಕ್ಕುಗಳಿಂದ ವಂಚಿತರಾಗಿದ್ದಾರೆ. ಆ ಎಲ್ಲರನ್ನು ಮುಖ್ಯವಾಹಿನಿಗೆ ತರಬೇಕು ಎಂದು ಆಗ್ರಹಿಸಿ ವಿಮುಕ್ತಿ ವಿದ್ಯಾಸಂಸ್ಥೆ, ನಕ್ಷತ್ರ ಮಕ್ಕಳ ಪಾರ್ಲಿಮೆಂಟ್, ಶಾಂತಿ ಮತ್ತು ಸೌಹಾರ್ದ ವೇದಿಕೆ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಜಿಲ್ಲೆಯ ಪ್ರತಿ ತಾಲೂಕಿನಲ್ಲೂ ವಿಶೇಷ ಶಾಲೆಗಳಲ್ಲಿ ಅಂಗವಿಕಲ ಮಕ್ಕಳಿಗೆ ಶಿಕ್ಷಣ ಸಿಗಲು ಶಾಲೆಗಳನ್ನು ಆರಂಭಿಸಬೇಕು. ಅಗತ್ಯ ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗೆ ಒತ್ತಾಯಿಸಿ ಮನವಿ ಸಲ್ಲಿಸಿದರು.

ಬಾಲ್ಯವಿವಾಹ, ಶಾಲೆಯಿಂದ ಹೊರಗುಳಿಯುವ ಮಕ್ಕಳು ಗ್ರಾಮೀಣ ಪ್ರದೇಶಗಳಲ್ಲಿ ಕಂಡು ಬರುತ್ತಿದ್ದು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಂಡು ಎಲ್ಲ ಮಕ್ಕಳಿಗೂ ಕಡ್ಡಾಯ ಶಿಕ್ಷಣ ಸಿಗುವಂತೆ ಮಾಡಬೇಕು ಎಂದು ಆಗ್ರಹಿಸಿದರು.

ಎಲ್ಲ ಶಾಲಾ-ಕಾಲೇಜುಗಳಲ್ಲಿ ಕಿಶೋರಿಯರಿಗೆ ಸ್ಯಾನಿಟರಿ ಪ್ಯಾಡ್‌ಗಳನ್ನು ಶಿಕ್ಷಣ ಹಾಗೂ ಆರೋಗ್ಯ ಇಲಾಖೆ ಮೂಲಕ ಒದಗಿಸಲು ಕ್ರಮ ಜರುಗಿಸಬೇಕು ಎಂದು ಕೋರಿದರು.

ವಿಮುಕ್ತಿ ವಿದ್ಯಾಸಂಸ್ಥೆಯ ಅಧ್ಯಕ್ಷೆ ಅನ್ನಪೂರ್ಣಾ, ನಕ್ಷತ್ರ ಮಕ್ಕಳ ಪಾರ್ಲಿಮೆಂಟ್‌ನ ಅಧ್ಯಕ್ಷೆ ಹೇಮಲತಾ, ಶಾಂತಿ-ಸೌಹಾರ್ದ ವೇದಿಕೆ ಅಧ್ಯಕ್ಷ ಎನ್.ಅರುಣ್‌ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net