ಅಂಗವಿಕಲರಿಂದ ಅರ್ಜಿ ಅಹ್ವಾನ

Application
Published on

ಚಾಮರಾಜನಗರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 2025-26ನೇ ಸಾಲಿನ 13 ಫಲಾನುಭವಿ ಆಧಾರಿತ ಯೋಜನೆಗಳ ಸೌಲಭ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಧಾರ್ ಯೋಜನೆ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ, ಮರಣ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್‌ಕಿಟ್, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ವಾಹನ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ, ಸಾಧನ ಸಲಕರಣೆಗಳ, ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವೀಲ್ ಚೇರ್ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.

ನೇರವಾಗಿಯು ಸಹ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಆಯಾ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿರುವ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ (ಎಂ.ಆರ್.ಡಬ್ಲ್ಯೂ) ಖುದ್ದಾಗಿ ದ್ವಿಪತ್ರಿಯಲ್ಲಿ ಅ.15 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಯು.ಆರ್.ಡಬ್ಲ್ಯೂ ಹಾಗೂ ವಿ.ಆರ್.ಡಬ್ಲ್ಯೂ.ಗಳನ್ನು ಸಂಪರ್ಕಿಸಬಹುದು. ವಿವರಗಳಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net