

ಬೀದರ್: ಜೈ ಭಾರತ ಮಾತಾ ಸೇವಾ ಸಮಿತಿಯಿಂದ ಸಮಿತಿ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷ ಶ್ರೀ ಹವಾ ಮಲ್ಲಿನಾಥ ಮಹಾರಾಜರ (ನಿರಗುಡಿ ಮುತ್ತ್ಯಾ) ಜನ್ಮ ದಿನ ನಿಮಿತ್ತ ಜೈ ಭಾರತ ಮಾತಾ ಸೇವಾ ಸಮಿತಿ ಭಾಲ್ಕಿ ತಾಲೂಕು ಅಧ್ಯಕ್ಷ ಪಪ್ಪು ಪಾಟೀಲ್ ಖಾನಾಪುರ ಅಂಗಾಂಗ ದಾನ ಮಾಡಿ ಶ್ರೀಗಳಿಗೆ ಭಕ್ತಿ ಸಮರ್ಪಿಸಿದ್ದಾರೆ.
ಪೂಜ್ಯರ ಜನ್ಮ ದಿನ ಸ್ಮರಣೀಯವಾಗಿಸಲು, ವೈದ್ಯಕೀಯ ಸಂಶೋಧನಾ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಅಂಗಾಂಗ ದಾನ ಮಾಡಿದ್ದಾರೆ. ಆನ್ ಲೈನ್ ಮೂಲಕ ನೋಂದಣಿ ಮಾಡಿಸಿಕೊಂಡಿದ್ದಾರೆ. ಸಾವಿನ ನಂತರವೂ ನಮ್ಮ ಅಂಗಗಳು ವ್ಯರ್ಥವಾಗಬಾರದು. ಯುವಕರು ಅಂಗಾಂಗ ದಾನಕ್ಕೆ ಮುಂದಾಗಬೇಕು ಎಂದು ಪಾಟೀಲ್ ಮನವಿ ಮಾಡಿದ್ದಾರೆ.