ಅಂಜಲಿ ಅಂಬಿಗೇರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

cm cheque
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಯುವಕನಿಂದ ಹತ್ಯೆಗೀಡಾದ ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯ 5 ಲಕ್ಷ ರೂ. ಪರಿಹಾರ ವಿತರಿಸಲಾಯಿತು.

ಕಿತ್ತೂರಿಗೆ ತೆರಳಲು ಶುಕ್ರವಾರ ಸಂಜೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಪರಿಹಾರ ಮೊತ್ತದ ಚೆಕ್​ಅನ್ನು ಕುಟುಂಬಸ್ಥರಿಗೆ ವಿತರಿಸಿದರು. ಸೋನಿಯಾಗಾಂಧಿ ನಗರದಲ್ಲಿ ಮನೆ ಸಹ ನೀಡುವುದಾಗಿ ಸಿಎಂ ಹೇಳಿದರು. ಅಂಜಲಿ ಸಹೋದರ ಯಶೋಧಾ ಅಂಬಿಗೇರ, ರಾಜು ಗುರುಸ್ವಾಮಿ, ಮನೋಜ ಕರ್ಜಗಿ ಇದ್ದರು.

ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ, ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಪ್ರಸಾದ ಅಬ್ಬಯ್ಯ, ಶಾಸಕರಾದ ವಿಶ್ವಾಸ ವೈದ್ಯ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಹುಬ್ಬಳ್ಳಿ ಶಹರ ತಹಶೀಲ್ದಾರ ಕಲಗೌಡ ಪಾಟೀಲ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net