ಅಂತರ ಕಾಲೇಜುಗಳ ಕ್ರೀಡಾಕೂಟದಲ್ಲಿ ಸಾಧನೆ

14-KGL-1,,,
Published on

ಕೊಳ್ಳೇಗಾಲ: ಚಾಮರಾಜನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪುರುಷ ಮತ್ತು ಮಹಿಳೆಯರ ಅಂತರ ಕಾಲೇಜುಗಳ ಕ್ರೀಡಾಕೂಟದಲ್ಲಿ ಸಾಧನೆಗೈದ ಪಟ್ಟಣದ ಜೆಎಸ್‌ಎಸ್ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಹಾಗೂ ಕಾಲೇಜು ಸಿಬ್ಬಂದಿ ಅಭಿನಂದಿಸಿದರು.

ಮಹಿಳಾ ಕಾಲೇಜು ಪ್ರಾಂಶುಪಾಲ ಕೊಂಗಳಪ್ಪ ಮಾತನಾಡಿ, ಮೊದಲ ಬಾರಿಗೆ ಚಾಮರಾಜನಗರ ವಿಶ್ವವಿದ್ಯಾಲಯ ಆಯೋಜಿಸಿದ್ದ ಅಂತರ ಜಿಲ್ಲಾ ಕ್ರೀಡಾಕೂಟದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರು ಸಾಧನೆ ಮಾಡಿರುವುದು ಖುಷಿಯ ವಿಚಾರ. ವಾಲಿಬಾಲ್ ಮತ್ತು ಕಬಡ್ಡಿಯಲ್ಲಿ ಪ್ರಥಮ, ಥ್ರೋಬಾಲ್‌ನಲ್ಲಿ ತೃತೀಯ ಸ್ಥಾನವನ್ನು ವಿದ್ಯಾರ್ಥಿನಿಯರು ಪಡೆದಿದ್ದಾರೆ. ಕ್ರೀಡೆ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಸಹಕಾರಿ. ಹಾಗಾಗಿ ಮಕ್ಕಳು ಶೈಕ್ಷಣಿಕ ಚಟುವಟಿಕೆ ಜತೆಗೆ ಕ್ರೀಡೆಗೂ ಆದ್ಯತೆ ನೀಡಬೇಕೆಂದು ಕಿವಿಮಾತು ಹೇಳಿದರು.

ವಾಲಿಬಾಲ್ ಕ್ರೀಡೆಯಲ್ಲಿ ವಿದ್ಯಾರ್ಥಿನಿಯರಾದ ಪ್ರಿಯದರ್ಶಿನಿ, ಕುಲ್ಸುಮ್, ಮಧು, ಸಿಂಚನಾ, ಭವಾನಿ, ಬಿಂದು, ಸ್ಪಂದನಾ, ಕೀರ್ತಿ, ಲಲಿತಾ ಪ್ರಥಮ ಬಹುಮಾನ ಪಡೆದಿದ್ದಾರೆ. ಕಬಡ್ಡಿ ಕ್ರೀಡೆಯಲ್ಲಿ ಎಂ.ಕೆ.ಪೂಜಾ, ಹರ್ಷಿತಾ, ರೂಪಾ, ಪೂಜಾ, ಭವಾನಿ, ಸಿಂಚನಾ, ಪ್ರಿಯದರ್ಶಿನಿ, ಮಧು, ಸೌಜನ್ಯಾ, ಮೋನಿಕಾ, ಮಾನಸಾ, ಬೇಬಿ ಪ್ರಥಮ ಬಹುಮಾನ ಪಡೆದಿದ್ದಾರೆ. ಬಾಲ್ ಬಾಡ್ಮಿಂಟನ್ ಕ್ರೀಡೆಯಲ್ಲಿ ಟಿ.ಎಸ್.ಸಿಂಚನಾ, ರೀತು ನಾಯಕ್, ಅಮೃತಾ, ದಿವ್ಯಾ, ಮಹದೇವಿ, ಮಂಗಳಮ್ಮ, ಅನು, ಹರ್ಷಿತಾ, ಕೀರ್ತಿ, ಪೂಜಾ ತೃತೀಯ ಬಹುಮಾನ ಪಡೆದಿದ್ದಾರೆ. ಕನ್ನಡ ಪ್ರಾಧ್ಯಾಪಕ ನಾಗಭೂಷಣ್, ಆಡಳಿತಾಧಿಕಾರಿ ಗಿರೀಶ್, ದೈಹಿಕ ಶಿಕ್ಷಣ ನಿರ್ದೇಶಕ ಶ್ರೀಧರ್ ಇತರರಿದ್ದರು.

ನಮ್ಮ ಕಾಲೇಜು ಗುಣಮಟ್ಟ ಶಿಕ್ಷಣದೊಂದಿಗೆ ಕ್ರೀಡೆಗೂ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಇದರ ಪರಿಣಾಮ ಕಬಡ್ಡಿ ಕ್ರೀಡೆಯಲ್ಲಿ ಪ್ರಥಮ ಬಹುಮಾನ ಪಡೆಯಲು ಸಹಕಾರಿಯಾಗಿದೆ. ಭವಾನಿ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ, ಜೆಎಸ್‌ಎಸ್ ಮಹಿಳಾ ಕಾಲೇಜು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net