ಅಂತರ ಶಾಲಾಮಟ್ಟದ ಸ್ಪರ್ಧೆ

app school - Copy
Published on

ಬೀದರ್: ತಾಲ್ಲೂಕಿನ ಗೋರನಳ್ಳಿ ಸಮೀಪ ಇರುವ ಶರಣಬಸವ ಪಬ್ಲಿಕ್ ಸ್ಕೂಲ್‍ನಲ್ಲಿ ಅಂತರರಾಷ್ಟ್ರೀಯ ಯುವ ದಿನ ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಅಂತರ ಶಾಲಾ ಮಟ್ಟದ ವಿವಿಧ ಸ್ಪರ್ಧೆಗಳು ನಡೆದವು.

ಚಿತ್ರಕಲೆ, ನೃತ್ಯ, ಗಾಯನ, ನಿಬಂಧ, ಫ್ಯಾನ್ಸಿ ಉಡುಪು ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ 68 ಶಾಲೆಗಳ 500ಕ್ಕೂ ಅಧಿಕ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ಕಲಬುರಗಿಯ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಶರಣಬಸವಪ್ಪ ಅಪ್ಪ, ಡಾ. ದಾಕ್ಷಾಯಣಿ ತಾಯಿ, ಚಿ. ದೊಡ್ಡಪ್ಪ ಅಪ್ಪ, ಕಾರ್ಯದರ್ಶಿ ಬಸವರಾಜ ದೇಶಮುಖ ಹಾಗೂ ನಿರ್ದೇಶಕ ಶರಣಬಸಪ್ಪ ದೇಶಮುಖ ಅವರ ಮಾರ್ಗದರ್ಶನದಲ್ಲಿ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಾಚಾರ್ಯರು ತಿಳಿಸಿದರು.

ಲಿಂಗರಾಜ ಅಪ್ಪ ಕಾಲೇಜು ನಿರ್ದೇಶಕ ಶರಣಬಸಪ್ಪ ದೇಶಮುಖ, ಪ್ರಾಚಾರ್ಯೆ ಡಾ. ವಿನಿತಾ ಪಾಟೀಲ, ವಿಜೈ ಇವೆಂಟ್ಸ್‍ನ ವಿಜಯ ರಾಮಲು, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು. ಶರಣ ಬಸವ ಪಬ್ಲಿಕ್ ಸ್ಕೂಲ್ ಹಾಗೂ ವಿಜೈ ಇವೆಂಟ್ಸ್ ವತಿಯಿಂದ ಸ್ಪರ್ಧೆ ಆಯೋಜಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net