ಅಂತರರಾಷ್ಟ್ರೀಯ ಸಾಕ್ಷರತಾ ದಿನ ಆಚರಣೆ

bkt-14-1
ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಬಾಗಲಕೋಟೆ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾ ಲೋಕಶಿಕ್ಷಣ ಸಮಿತಿಯ ಅಧ್ಯಕ್ಷ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ನವಸಾಕ್ಷರರಿಗೆ ಪ್ರಮಾಣ ಪತ್ರಗಳನ್ನು ವಿತರಿಸಿದರು.
Published on

ಬಾಗಲಕೋಟೆ: ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾ ಲೋಕಶಿಕ್ಷಣ ಸಮಿತಿಯ ಅಧ್ಯಕ್ಷ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಬುಧವಾರ ಸಾಕ್ಷರತಾ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಾಕ್ಷರತಾ ಪ್ರಮಾಣ ವಚನವನ್ನು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಎನ್.ಬಿ.ಗೊರವರ ಬೋಸಿದರು. ತದನಂತರ 2021-22 ನೇ ಸಾಲಿನ ನವಸಾಕ್ಷರರಿಗೆ ಅಪರ ಜಿಲ್ಲಾಕಾರಿ ಮಹಾದೇವ ಮುರಗಿ ಪ್ರಮಾಣ ಪತ್ರಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಇಳಕಲ್ಲ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನಿರ್ದೇಶಕ ದೊಡ್ಡಬಸಪ್ಪ ನೀರಲಕೇರಿ, ಉಪಸಮನ್ವಯಾಕಾರಿ ಜಾಸ್ಮಿನ್ ಕಿಲ್ಲೆದಾರ, ಕ್ಷೇತ್ರ ಶಿಕ್ಷಣಾಧಿಕಾರಿ ಸಾವಿತ್ರಿ ಕೊಂಡಗೋಳಿ, ತಾಲೂಕ ಸಂಯೋಜಕ ವೈ.ಡಿ.ಕಿರಸೂರ, ರಾಜು ಸನಗಿನ, ಕಾರ್ಯಕ್ರಮ ಸಹಾಯಕರು ಸಾವಿತ್ರಿ ಕಲಬುರಗಿ, ಸ್ವಯಂ ಸೇವಾ ಸಂಘದ ಮುಖ್ಯಸ್ಥ ಪ್ರಹ್ಲಾದ ಭೋವಿ ಹಾಗೂ ನವ ಸಾಕ್ಷರರು, ಬೋಧಕರು ಸ್ವಯಂ ಸಂಸ್ಥೆಯ ಮುಖ್ಯಸ್ಥರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net