ಅಂತರ್​ಶಾಲಾ ವಿಜ್ಞಾನ ವಸ್ತು ಪ್ರದರ್ಶನ

Kattimani School
Published on

ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರ ಕೆಎಲ್​ಇ ಸಂಸ್ಥೆಯ ಎಚ್.ಎಫ್. ಕಟ್ಟಿಮನಿ ಕನ್ನಡ ಪ್ರೌಢಶಾಲೆಯಲ್ಲಿ ಅಂತರ್ ಶಾಲಾ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಏರ್ಪಡಿಸಲಾಗಿತ್ತು.

ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಪಾಲ್ಗೊಂಡು ಸುಮಾರು 48 ಪ್ರಾಯೋಗಿಕ ಮಾದರಿಗಳನ್ನು ಪ್ರದರ್ಶಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪ್ಪಗೌಡ ಅವರು ಸಸಿಗೆ ನೀರೆರೆದು ಕಾರ್ಯಕ್ರಮ ಉದ್ಘಾಟಿಸಿದರು. ವೈಜ್ಞಾನಿಕ ಮನೋಭಾವದ ಜತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ನಿರ್ಣಾಯಕರಾದ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಕೆ.ಎಚ್. ನಾಯಕ್ ಅವರು, ಮೂಲ ವಿಜ್ಞಾನದ ಮಹತ್ವ, ವೈಜ್ಞಾನಿಕ ಚಿಂತನೆ ಕುರಿತು ಅರಿವು ಮೂಡಿಸಿದರು.

ಪ್ರೌಢಶಾಲೆ ಮುಖ್ಯಾಧ್ಯಾಪಕಿ ಎಲ್.ಜಿ. ಗಾಣಿಗೇರ, ವಿಜ್ಞಾನದ ಬಗ್ಗೆ ತಿಳಿದುಕೊಳ್ಳಲು ಸ್ಪರ್ಧೆ ಉತ್ತಮ ವೇದಿಕೆ ಎಂದರು. ಶಾಲೆಯ ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಬಿ.ಬಿ. ನಾಯಕ್ ಅಧ್ಯಕ್ಷತೆ ವಹಿಸಿದ್ದರು.

ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಿಕ್ಷಕಿ ವಿ.ವಿ. ಹುದ್ದಾರ ನಿರೂಪಿಸಿದರು. ಎಸ್.ಸಿ. ಸವದತ್ತಿ ಪರಿಚಯಿಸಿದರು. ಪಿ.ಎಸ್. ಕಳ್ಳಿಮನಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net