ಅಂತಾರಾಷ್ಟ್ರೀಯ ಚಿತ್ರಕಲಾ ಪ್ರದರ್ಶನಕ್ಕೆ ದುರ್ಗದ ಕಲಾವಿದ

CTD 6 H.DADAPEER--006
Published on

ಚಿತ್ರದುರ್ಗ: ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನದ ಅಂಗವಾಗಿ ನೇಪಾಳದ ಕಠ್ಮಂಡುವಿನಲ್ಲಿ ಆಯೋಜಿಸಿರುವ ಅಂತಾರಾಷ್ಟ್ರೀಯ ಚಿತ್ರಕಲಾ ಪ್ರದರ್ಶನದಲ್ಲಿ ಜಿಲ್ಲೆಯ ಕಲಾವಿದ ಚಿತ್ರದುರ್ಗದ ಎಚ್.ದಾದಾಪೀರ್ ಪಾಲ್ಗೊಳ್ಳುತ್ತಿದ್ದಾರೆ. ಕಠ್ಮಂಡು ವಿನ ಸ್ಕೈಆರ್ಟ್ ಗ್ಯಾಲರಿಯಲ್ಲಿ ಏ.14ರಿಂದ 18ರ ವರೆಗೆ ಏರ್ಪಡಿಸಿರುವ ಈ ಪ್ರದರ್ಶನದಲ್ಲಿ 17 ರಾಷ್ಟ್ರಗಳ ಕಲಾವಿದರು ತಮ್ಮ ಕಲಾಕೃತಿಗಳನ್ನು ಪ್ರದರ್ಶಿಸುತ್ತಿದ್ದಾರೆ. ಕಳೆದ 25 ವರ್ಷಗಳಿಂದ ಚಿತ್ರಕಲಾ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರುವ ದಾದಾಪೀರ್ ಅವರು ಚಿತ್ರದುರ್ಗ ತಾಲೂಕು ತುರುವನೂರು ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಚಿತ್ರಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net