

ಸೋಮವಾರಪೇಟೆ: ಮಹಿಳಾ ಸಮಾಜದ ಸಭಾಂಗಣದಲ್ಲಿ ಮಂಗಳವಾರ ರೋಟರಿ ಕ್ಲಬ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಯಿತು.
ಮುಖ್ಯ ಅತಿಥಿ ಡಾ.ಸುಪರ್ಣ ಕೃಷ್ಣಾನಂದ ಮಾತನಾಡಿ, ಮಹಿಳೆಯರು ದೈಹಿಕವಾಗಿ ಸಾಕಷ್ಟು ಶ್ರಮ ಪಡುತ್ತಿರುವ ನಡುವೆ, ತಮ್ಮ ವೈಯುಕ್ತಿಕ ಸಮಸ್ಯೆಗಳ ಬಗ್ಗೆ ತೀರಾ ನಿರಾಸಕ್ತಿ ವಹಿಸುತ್ತಿರುವುದರಿಂದ, ಕೆಲವರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾಲ ಕಾಲಕ್ಕೆ ತಮ್ಮ ಆರೋಗ್ಯವನ್ನು ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಮುಂಜಾಗ್ರತೆ ವಹಿಸಬೇಕೆಂದರು.
ಸಂಸ್ಥೆಯ ಅಧ್ಯಕ್ಷ ಲೋಕೇಶ್ ಅಧ್ಯಕ್ಷತೆಯನ್ನು ವಹಿಸಿದ್ದರು. ಇದೇ ವೇಳೆ ಮಹಿಳಾ ಸದಸ್ಯರಿಂದ ಫ್ಯಾಷನ್ ಶೋ ಮತ್ತು ನೃತ್ಯ ಪ್ರದರ್ಶನ ನಡೆಯಿತು.