ಅಂಧರಿಗೆ ಶಕ್ತಿ ತುಂಬುವ ಅಗತ್ಯವಿದೆ

1 ckm 5
ಚಿಕ್ಕಮಗಳೂರು ಆಶಾ ಕಿರಣ ಅಂಧಮಕ್ಕಳ ಶಾಲೆಯಲ್ಲಿ ಕೆಪಿಟಿಸಿಎಲ್‌ನ ಸಿಎಸ್‌ಆರ್ ನಿಧಿಯಲ್ಲಿ ಸುಮಾರು ೫೧ ಲಕ್ಷ ರೂ. ವೆಚ್ಚದಲ್ಲಿ ಅಂಧಮಕ್ಕಳ ಸಿಬ್ಬಂದಿಗೆ ನಿರ್ಮಿಸಿರುವ ಕೃಷ್ಣ ಮತ್ತು ಕಾವೇರಿ ವಸತಿ ಗೃಹಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಉದ್ಘಾಟಿಸಿದರು. ಎಚ್.ಡಿ.ತಮ್ಮಯ್ಯ, ಮೀನಾ ನಾಗರಾಜ್, ಎಚ್.ಎಸ್.ಕೀರ್ತನಾ, ಡಾ.ವಿಕ್ರಮ ಅಮಟೆ, ಡಾ.ಜೆ.ಪಿ.ಕೃಷ್ಣೇಗೌಡ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಜನಸಾಮಾನ್ಯರಿಗೆ ಅನುಕೂಲವಾಗುವಂತೆ ವಸತಿ ಯೋಜನೆಯಡಿ ಹಲವಾರು ಕಾರ್ಯಕ್ರಮಗಳನ್ನು ಕೊಡುವ ಮೂಲಕ ರಾಜ್ಯಸರ್ಕಾರ ದೊಡ್ಡ ಕ್ರಾಂತಿ ಮಾಡುತ್ತಿದೆ ಎಂದು ರಾಜ್ಯ ಇಂಧನ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ತಿಳಿಸಿದರು.

ನಗರದ ಕೆಂಪನಹಳ್ಳಿಯ ಆಶಾಕಿರಣ ಅಂಧಮಕ್ಕಳ ಶಾಲಾವರಣದಲ್ಲಿ ಶನಿವಾರ ಇಂಧನ ಇಲಾಖೆ, ಜಿಲ್ಲಾಡಳಿತ, ಜಿಪಂ, ಕರ್ನಾಟಕ ಅಂಧರ ಒಕ್ಕೂಟ, ಆಶಾಕಿರಣ ಚಾರಿಟಬಲ್ ಟ್ರಸ್ಟ್, ಆಶ್ರಯ ಫೌಂಡೇಶನ್, ಆಶಾಕಿರಣ ಅಂಧಮಕ್ಕಳ ವಸತಿಯುತ ಪಾಠಶಾಲೆಯಿಂದ ಕೆಪಿಟಿಸಿಎಲ್‌ನ ಸಿಎಸ್‌ಆರ್ ನಿಧಿಯಲ್ಲಿ ಸುಮಾರು ೫೧ ಲಕ್ಷ ರೂ. ವೆಚ್ಚದಲ್ಲಿ ಅಂಧಮಕ್ಕಳ ಸಿಬ್ಬಂದಿಗೆ ನಿರ್ಮಿಸಿರುವ ಕೃಷ್ಣ ಮತ್ತು ಕಾವೇರಿ ವಸತಿ ಗೃಹಗಳನ್ನು ಉದ್ಘಾಟಿಸಿ ಮಾತನಾಡಿದರು.

ಕಳೆದ ಹಲವಾರು ವರ್ಷಗಳಿಂದ ಆಶಾಕಿರಣ ಅಂಧಮಕ್ಕಳ ಟ್ರಸ್ಟ್ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದೆ ಎಂದು ಶ್ಲಾಘಸಿದ ಅವರು, ರಾಜ್ಯಾದ್ಯಂತ ಅಂಧರ ಕೌಶಲ್ಯಕ್ಕೆ ತಕ್ಕಂತೆ ಸೌಲಭ್ಯಗಳನ್ನು ನೀಡಿ ಸಮಾಜದ ಮುನ್ನಲೆಗೆ ತರುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಅಂಧರಿಗೆ ಕೇವಲ ಭಾಷಣದಲ್ಲಿ ಸಿಂಪತಿ ತೋರದೆ ಶಕ್ತಿ ತುಂಬುವ ಅಗತ್ಯ ಇದೆ. ಇದು ಜಾರಿಯಾದಾಗ ರಾಜ್ಯ, ದೇಶ ಅವರನ್ನು ಕಾಣುವ ಮನಸ್ಥಿತಿ ಬದಲಾಗುತ್ತದೆ ಎಂದು ತಿಳಿಸಿದರು.

ಅಂಧಮಕ್ಕಳ ಶಾಲೆಯು ತನ್ನ ಸಮಾಜಮುಖಿ ಕಾರ್ಯಗಳಿಂದ ಅಂಧರ ಬಾಳಿಗೆ ಬೆಳಕು ನೀಡುವ ಉz್ದೆÃಶದೊಂದಿಗೆ ಸ್ಥಾಪನೆಯಾಗಿದೆ. ಅಂಧಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಾಗ ಅಂತರಾಷ್ಟಿçÃಯ ಮಟ್ಟದಲ್ಲಿ ಅವರು ಗುರುತಿಸಿಕೊಳ್ಳಲು ಸಾಧ್ಯ. ಅಂಧರ ಬಾಳಿನಲ್ಲಿ ನಾವೆಲ್ಲ ಗಟ್ಟಿಯಾಗಿ ನಿಂತು ಸೇವೆ ಸಲ್ಲಿಸಿದಾಗ ಅವರು ಸಾಧನೆ ಮಾಡಲು ಸಹಾಯವಾಗುತ್ತದೆ ಎಂದರು.

ಡಾ. ಬಿ.ಆರ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯದಂತೆ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಡಿ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರಿಗೆ, ಶೋಷಿತರಿಗೆ ಶಕ್ತಿ ತುಂಬಬೇಕು ಎಂದು ಹೇಳಿದರು.

ಕೋವಿಡ್ ನಂತರ ದೇಶದ ಜನತೆ ಸಂಕಷ್ಟದಲ್ಲಿದ್ದಾರೆAಬುದನ್ನು ಮನಗಂಡು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕಾಲ್ನಡಿಗೆ ಜಾಥಾ ಆರಂಭಿಸುವ ಮೂಲಕ ಸಮಸ್ಯೆಗಳನ್ನು ಆಲಿಸಿದರು. ಮಹಿಳೆ ಶಿಕ್ಷಣವಂತಳಾದಾಗ ಮಾತ್ರ ಸುಶಿಕ್ಷಿತ ಸಮಾಜ ನಿರ್ಮಾಣವಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಧರ ಒಕ್ಕೂಟದ ಅಧ್ಯಕ್ಷ ಡಾ. ಜಿ.ಪಿ ಕೃಷ್ಣೇಗೌಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಸಕ ಎಚ್.ಡಿ. ತಮ್ಮಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಕೆ.ಪಿ ಅಂಶುಮAತ್, ನಗರಸಭಾಧ್ಯಕ್ಷೆ ಶೀಲಾದಿನೇಶ್, ಉಪಾಧ್ಯಕ್ಷೆ ಲಲಿತಾನಾಯ್ಕ್, ಜಿಲ್ಲಾಧಿಕಾರಿ ಮೀನಾನಾಗರಾಜ್, ಜಿಪಂ ಸಿಇಓ ಎಚ್.ಎಸ್. ಕೀರ್ತನ, ಎಸ್‌ಪಿ ಡಾ. ವಿಕ್ರಮ ಅಮಟೆ, ನಗರಸಭೆ ಆಯುಕ್ತ ಬಿ.ಸಿ. ಬಸವರಾಜು, ಎಐಟಿ ಪ್ರಾಚಾರ್ಯ ಡಾ.ಸಿ.ಟಿ.ಜಯದೇವ, ತಹಸೀಲ್ದಾರ್ ರೇಷ್ಮಾ, ಡಾ. ವರ್ಷಅಭಿಷೇಕ್, ಆಶ್ರಯ ಫೌಂಡೇಶನ್, ಅಧ್ಯಕ್ಷ ಸಾಗರ್, ನಗರಸಭೆ ಸದಸ್ಯೆ ಮಂಜುಳ ಲಕ್ಷö್ಮಣ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net