ಅಂಬಿಗರ ಚೌಡಯ್ಯ ಜಯಂತ್ಯುತ್ಸವ

2
Published on

ಮೈಸೂರು: ನಗರದ ಕಲಾಮಂದಿರದ ಮನೆಯಂಗಳದಲ್ಲಿ ಶರಣ, ವಚನಕಾರ ಅಂಬಿಗರ ಚೌಡಯ್ಯ ಅವರ ಜಯಂತಿಯನ್ನು ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬುಧವಾರ ಸರಳವಾಗಿ ಆಚರಿಸಲಾಯಿತು.
ಶಾಸಕ ಎಲ್. ನಾಗೇಂದ್ರ ಅವರು ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ಪುಷ್ಪ್ಪಾರ್ಚನೆ ಮಾಡುವ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಚೆನ್ನಪ್ಪ ಮಾತನಾಡಿ, ಅಂಬಿಗರ ಚೌಡಯ್ಯ ಅವರು 12ನೇ ಶತಮಾನದಲ್ಲಿ ಜೀವಿಸಿದ್ದ ಒಬ್ಬ ಶ್ರೇಷ್ಠ ಶಿವಶರಣ ಹಾಗೂ ವಚನಕಾರರಾಗಿದ್ದರು. ವೃತ್ತಿಯಲ್ಲಿ ಅಂಬಿಗರಾಗಿದ್ದ ಇವರು, ಪ್ರವೃತ್ತಿಯಲ್ಲಿ ಅನುಭಾವಿ ಪಂಡಿತರಾಗಿದ್ದರು. ತಮ್ಮ ನಿರ್ಭಿತಿ ನುಡಿಗಳಿಂದ ವಚನಗಳನ್ನು ಬರೆದಿದ್ದು, ಬಸವಣ್ಣನವರ ಅನುಭವ ಮಂಟಪದಲ್ಲಿ ಸಮಾನ ಭೂಮಿಕೆಯ ಸಮ್ಮೇಳನದಲ್ಲಿ ಸೇರಿಕೊಂಡಿದ್ದರು. ಅಂದಿನ ಕಾಲದಲ್ಲಿ ಜೀವಿಸಿದ್ದ ವಚನಕಾರರಲ್ಲೇ ಚೌಡಯ್ಯ ಅವರದ್ದು ಭಿನ್ನ ಮತ್ತು ವಿಶಿಷ್ಟ ವ್ಯಕ್ತಿತ್ವವಾಗಿತ್ತು ಎಂದರು.
ಅಪರ ಜಿಲ್ಲಾಧಿಕಾರಿ ಮಂಜುನಾಥ್‌ಸ್ವಾಮಿ, ಕರ್ನಾಟಕ ಮೃಗಾಲಯದ ಪ್ರಾಧಿಕಾರದ ಅಧ್ಯಕ್ಷ ಮಹದೇವಸ್ವಾಮಿ, ಅರಗು ಬಣ್ಣದ ಕಾರ್ಖಾನೆಯ ಅಧ್ಯಕ್ಷ ಫಣೀಶ್ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net