

ಹಾಸನ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಅಂಬಿಗರ ಚೌಡಯ್ಯ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬೆಳ್ಳಿ ರಥದ ಮೇಲೆ ಇರಿಸಲಾಗಿದ್ದ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಹಾಗೂ ಸಮುದಾಯದ ಮುಖಂಡರು ಚಾಲನೆ ನೀಡಿದರು. ಬಳಿಕ ವಿವಿಧ ಕಲಾತಂಡಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಂಚರಿಸಿ ಕಲಾಭವನ ತಲುಪಿತು.