

ಚಿಕ್ಕಮಗಳೂರು: ದೇಶಕ್ಕೆ ಸುಭದ್ರವಾದ ಸಂವಿಧಾನವನ್ನು ನೀಡಿರುವ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರು ರಾಷ್ಟçಕಂಡ ಅಪ್ರತಿಮ ವ್ಯಕ್ತಿ ಎಂದು ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್ ತಿಳಿಸಿದರು.
ನಗರಸಭೆ ವತಿಯಿಂದ ನಗರಸಭೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೪ ನೇ ಜನ್ಮದಿನಾಚರಣೆ ಸಮಾರಂಭವನ್ನುz್ದೆÃಶಿಸಿ ಮಾತನಾಡಿದ ಅವರು, ಸುಮಾರು ೫೪ ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಓದಿ ಕಟ್ಟಕಡೆಯ ವ್ಯಕ್ತಿಗೂ ಸಮಬಾಳು-ಸಮಪಾಲು ಸಿಗಬೇಕು ಎನ್ನುವ ನಿಟ್ಟಿನಲ್ಲಿ ಉತ್ತಮವಾದ ಸಂವಿಧಾನವನ್ನು ರಚಿಸಿಕೊಟ್ಟಿದ್ದಾರೆ. ಇದಕ್ಕಾಗಿ ಎಲ್ಲಾ ದೇಶವಾಸಿಗಳು ಅವರಿಗೆ ಚಿರಋಣಿಯಾಗಿರಬೇಕು ಎಂದು ಹೇಳಿದರು.
ತಮ್ಮ ತಂದೆ ತಂದೆ ರಾಮ್ ಜೀ ಮತ್ತು ತಮ್ಮ ಶಿಕ್ಷಕರಾದ ಅಂಬೇಡ್ಕರ್ ಅವರು ಸದಾ ಮಾರ್ಗದರ್ಶಕರಾಗಿದ್ದ ಹಿನ್ನೆಲೆಯಲ್ಲಿ ಭೀಮ್ ರಾವ್ ಅವರು ತಂದೆ ಮತ್ತು ಶಿಕ್ಷಕರ ಹೆಸರನ್ನು ಸದಾ ಸ್ಮರಿಸಬೇಕು ಎನ್ನುವ ಉz್ದÉÃಶದಿಂದ ತಮ್ಮ ಪೂರ್ಣ ಹೆಸರನ್ನು ಭೀಮರಾವ್ ರಾಮ್‌ಜಿ ಅಂಬೇಡ್ಕರ್ ಎಂದು ಇಟ್ಟುಕೊಂಡರು ಎಂದರು.
ನಗರಸಭೆ ಉಪಾಧ್ಯಕ್ಷೆ ಅನು ಮಧುಕರ್ ಮಾತನಾಡಿ, ನಮ್ಮೆಲ್ಲರಿಗೂ ಸಮಾನತೆ, ಭ್ರಾತೃತ್ವ ಹಾಗೂ ಹಕ್ಕುಗಳನ್ನು ತಂದು ಕೊಟ್ಟಂತಹ ಡಾ.ಬಿ.ಆರ್.ಅಂಬೇಡ್ಕರ್ ಅವರು ೯ ಭಾಷೆಗಳನ್ನು ಕಲಿತು ೩೪ ಪದವಿಗಳನ್ನು ಗಳಿಸಿದ ಮಹಾನ್ ವ್ಯಕ್ತಿಯಾಗಿದ್ದಾರೆ. ಅವರು ನಮ್ಮ ದೇಶಕ್ಕೆ ದೊಡ್ಡ ಕೊಡುಗೆ ಎಂದು ಹೇಳಿದರು.
ನಗರಸಭೆ ಆಯುಕ್ತ ಬಿ.ಸಿ.ಬಸವರಾಜ್ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಹುಟ್ಟುಹಬ್ಬದ ಆಚರಣೆ, ಆದರ್ಶಗಳನ್ನು ಸ್ಮರಿಸುವ ಜೊತೆಗೆ ಅವರ ಆದರ್ಶಗಳನ್ನು ಜಾರಿಗೆ ತರಲು ಎಲ್ಲರೂ ಮುಂದಾಗಬೇಕು ಎಂದು ಕರೆ ನೀಡಿದರು.
ಅಂಬೇಡ್ಕರ್ ಅವರು ತೋರಿಸಿದ ಹಾದಿಯಲ್ಲಿ ನಡೆದಾಗ ಅವರ ಹುಟ್ಟುಹಬ್ಬದ ಆಚರಣೆ ಸಾರ್ಥಕವಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಮೊದಲು ಒಳ್ಳೆಯ ವಿದ್ಯಾಭ್ಯಾಸವನ್ನು ಕೊಡಿಸಬೇಕು. ಶಿಕ್ಷಣಕ್ಕಾಗಿ ಸರ್ಕಾರ ಕೊಟ್ಟಿರುವ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಅಂಬೇಡ್ಕರ್ ಅಂತಹ ಮಹಾನ್ ಪುರುಷರ ಜಯಂತಿ ಆಚರಣೆ ಸಂದರ್ಭದಲ್ಲಿ ನಗರಸಭೆಯ ಎಲ್ಲಾ ನೌಕರರು ಸಿಬ್ಬಂದಿಗಳು ತಮಗೆ ವಹಿಸಿರುವ ಕೆಲಸವನ್ನು ನಿಷ್ಠೆಯಿಂದ ನಿರ್ವಹಿಸುವ ಪ್ರಮಾಣ ಮಾಡೋಣ ಎಂದು ತಿಳಿಸಿದರು.
ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ಲೋಕೇಶ್, ಪೌರ ಕಾರ್ಮಿಕರ ಸಂಭದ ಅಧ್ಯಕ್ಷ ನಾಗರಾಜ್, ಜಿಲ್ಲಾಧ್ಯಕ್ಷ ಅಣ್ಣಯ್ಯ, ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.