ಅಂಬೇಡ್ಕರ್ ಅವಮಾನಿಸಿದವರ ವಿರುದ್ಧ ಕ್ರಮ ಕೈಗೊಳ್ಳಿ

24CKD6
ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಡಾ. ಅಂಬೇಡ್ಕರ್ ಭಾವಚಿತ್ರ ಇಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಚಿಕ್ಕೋಡಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ಬಸವರಾಜ ಡಾಕೆ, ಸಂತೋಷ ದೊಡಮನಿ, ಜೀವನ ಮಾಂಜರೇಕರ, ಉದಯ ವಾಘಮೋರೆ, ನಿರಂಜನ ಕಾಂಬಳೆ ಇತರರಿದ್ದರು.
Published on

ಚಿಕ್ಕೋಡಿ: ಪಟ್ಟಣದಲ್ಲಿ ಆ.15 ರಂದು ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇರದೆ ಅವಮಾನಿಸಿದ್ದು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿ ವಿವಿಧ ದಲಿತ ಸಂಘಟನೆಗಳು ಬುಧವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತ ಪಡಿಸಿದರು.

ಪಟ್ಟಣದಲ್ಲಿರುವ ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನೆ ಆರಂಭಿಸಿದ ಪ್ರತಿಭಟನಾಕಾರರು, ಪ್ರತಿಭಟನಾ ರ‌್ಯಾಲಿ ಮೂಲಕ ಮಿನಿವಿಧಾನ ಸೌಧಕ್ಕೆ ತೆರಳಿ ಮನವಿ ಸಲ್ಲಿಸಿದರು.

ಸ್ವಾತಂತ್ರ್ಯ ದಿನದಂದು ಮಹಾತ್ಮಾ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವಿಟ್ಟು ಪೂಜೆ ಮಾಡಬೇಕು ಎಂದು ಸರ್ಕಾರದ ಆದೇಶವಿದೆ. ಆದರೂ ಕೇವಲ ಮಹಾತ್ಮಾ ಗಾಂಧೀಜಿ ಒಂದೇ ಭಾವಚಿತ್ರವಿಟ್ಟು ಪೂಜೆ ಮಾಡುವ ಮೂಲಕ ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಈ ಭಾಗದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಅವಮಾನ ಮಾಡಿದ್ದಾರೆ. ಕಾರಣ, ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು.

ಮುಖಂಡರಾದ ಬಸವರಾಜ ಡಾಕೆ, ಸಂತೋಷ ದೊಡಮನಿ, ಜೀವನ ಮಾಂಜರೇಕರ, ಉದಯ ವಾಘಮೋರೆ, ನಿರಂಜನ ಕಾಂಬಳೆ, ಅಪ್ಪಾಸಾಬ ಬ್ಯಾಳಿ, ಆನಂದ ಅರಬಳ್ಳಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net