ಅಂಬೇಡ್ಕರ್ ಒಂದು ವರ್ಗಕ್ಕೆ ಸೀಮಿತವಲ್ಲ

04 HANUR 6
Published on

ಹನೂರು: ತಾಲೂಕಿನ ಹುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಜಿ.ದೊಡ್ಡಿ ಗ್ರಾಮದಲ್ಲಿ ಶುಕ್ರವಾರ ಡಾ.ಬಿ.ಆರ್ ಅಂಬೇಡ್ಕರ್ ಬಳಗದ ನೂತನ ನಾಮಫಲಕವನ್ನು ಚನ್ನಾಲಿಂಗನಹಳ್ಳಿ ಜೇತನವನದ ಮನೋರಖ್ಖಿತ ಬಂತೇಜಿ ಉದ್ಘಾಟಿಸಿದರು.

ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಬಂತೇಜಿ ಅವರು ಮಾತನಾಡಿ, ಅಂಬೇಡ್ಕರ್ ಅವರು ಸಮಾನತೆ ತರುವ ಸಲುವಾಗಿ ದೇಶಕ್ಕೆ ಸಂವಿಧಾನವನ್ನು ಕೊಡುಗೆ ನೀಡಿದ್ದಾರೆ. ಈ ಮೂಲಕ ಸರ್ಕಾರ ಆಡಳಿತ ನಡೆಸುತ್ತಿದೆ. ಹಾಗಾಗಿ ಅಂಬೇಡ್ಕರ್ ಅವರು ಒಂದು ವರ್ಗಕ್ಕೆ ಮಾತ್ರ ಸೀಮಿತವಲ್ಲ. ಎಲ್ಲರೂ ಅವರ ಆದರ್ಶಗಳನ್ನು ಗೌರವಿಸಬೇಕು. ಮೊದಲ ಬಾರಿಗೆ ಗ್ರಾಮದಲ್ಲಿ ನಾಮಫಲಕ ಉದ್ಘಾಟಿಸುತ್ತಿರುವುದು ಸಂತಸದ ಸಂಗತಿ. ಬಳಗದ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಮಕ್ಕಳ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಅಂಬೇಡ್ಕರ್ ಅವರ ಭಾವಚಿತ್ರವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ದಸಂಸ ರಾಜ್ಯ ಸಂಘಟನಾ ಕಾರ್ಯದರ್ಶಿ ದೊಡ್ಡಿಂದವಾಡಿ ಸಿದ್ದರಾಜು, ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಕೆ.ವೀರ, ಜಿಲ್ಲಾ ಸಂಚಾಲಕ ಮಾಂಬಳ್ಳಿ ಹಿಂಡಯ್ಯ, ನಿವೃತ್ತ ಪ್ರಾಂಶುಪಾಲ ಜೆ.ಪ್ರಕಾಶ್, ಗ್ರಾಪಂ ಸದಸ್ಯ ಪುಟ್ಟವೀರನಾಯ್ಕ, ಮುಖಂಡರಾದ ಮಹದೇವ, ಬಾಲಕೃಷ್ಣ, ಚಿಕ್ಕತಾಯಮ್ಮ, ಬಳಗದ ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net