ಅಂಬೇಡ್ಕರ್ ಜಯಂತಿ ಇಂದು

Published on

ಸೋಮವಾರಪೇಟೆ: ಬೆಟ್ಟದಳ್ಳಿಯ ಸಿದ್ಧಾರ್ಥ ನಗರದ ಗ್ರಾಮಾಭಿವೃದ್ಧಿ ಸಮಿತಿ ಮತ್ತು ಮಾನವತಾ ಯುವಕ ಸಂಘದಿಂದ ಏ.14ರಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆ ಮತ್ತು ಹೋಬಳಿ ಮಟ್ಟದ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಸಿ.ಜಗದೀಶ್ ತಿಳಿಸಿದ್ದಾರೆ.


ಅಂದು ಬೆಳಗ್ಗೆ 7ಕ್ಕೆ ಗ್ರಾಮಾಭಿವೃದ್ಧಿ ಸಮಿತಿ ಖಜಾಂಚಿ ಬಿ.ಆರ್.ಅಜಿತ್ ಧ್ವಜಾರೋಹಣ ನಡೆಸಲಿದ್ದಾರೆ. 10 ಗಂಟೆಗೆ ಸೋಮವಾರಪೇಟೆಯ ಬಾಣಾವಾರ ರಸ್ತೆಯಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಗ್ರಾಮಾಭಿವೃದ್ಧಿ ಸಮಿತಿ ಸದಸ್ಯ ಬಿ.ಆರ್.ಯೋಗೇಶ್ ಮಾಲಾರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 3ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಭಾಷಣಕಾರರಾಗಿ ಕುಂದಳ್ಳಿ ರವಿ, ಪ್ರಗತಿಪರ ಚಿಂತಕರಾದ ರಾ.ಚಿಂತನ್, ಸಕಲೇಶಪುರದ ಡಿಎಸ್‌ಎಸ್ ರಾಜ್ಯ ಸಂಚಾಲಕ ಎಸ್.ಎನ್.ಮಲ್ಲಪ್ಪ ಪಾಲ್ಗೊಳ್ಳಲಿದ್ದಾರೆ.
15ರಂದು ಪುರುಷರಿಗೆ ವಾಲಿಬಾಲ್, ಮಹಿಳೆಯರಿಗೆ ಥ್ರೋಬಾಲ್, ಮಕ್ಕಳಿಗೆ ಮತ್ತು ಹಿರಿಯರಿಗೆ ಹಲವು ಕ್ರೀಡೆಗಳನ್ನು ಆಯೋಜಿಸಲಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಕುರಿತು ಪ್ರಬಂಧ ಸ್ಪರ್ಧೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net