ಅಂಬೇಡ್ಕರ್ ಜಯಂತಿ ಏ. ೨೭ಕ್ಕೆ

23 ckm 6 marle annayya
ಆಚರಣಾ ಸಮಿತಿಯ ಮುಖಂಡ ಮರ್ಲೆ ಅಣ್ಣಯ್ಯ
Published on

ಚಿಕ್ಕಮಗಳೂರು: ತಾಲೂಕಿನ ಮುಗುಳುವಳ್ಳಿ ಸಮೀಪ ಅಂಬಳೆ ಹೋಬಳಿ ಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಏ. ೨೭ರಂದು ಮಧ್ಯಾಹ್ನ ೨ ಗಂಟೆಗೆ ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆದಿದೆ ಎಂದು ಜಯಂತಿ ಆಚರಣಾ ಸಮಿತಿಯ ಮುಖಂಡ ಮರ್ಲೆ ಅಣ್ಣಯ್ಯ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಬಳೆ ಹೋಬಳಿಯ ೬ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದ ಜನರು ಸೇರಿ ಈ ಕಾರ್ಯಕ್ರಮ ಆಯೋಜಿಸಿದ್ದಾರೆ. ಜಿಲ್ಲೆಯ ನಾಗರಿಕರು, ಪ್ರಗತಿಪರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದು, ೪-೫ ಸಾವಿರ ಜನ ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮೈಸೂರಿನ ಉರಿಲಿಂಗ ಪೆದ್ದಿ ಮಠದ ಶ್ರೀಜ್ಞಾನಪ್ರಕಾಶ ಸ್ವಾಮೀಜಿ, ಕೊಳ್ಳೇಗಾಲ ಚನ್ನಲಿಂಗನಹಳ್ಳಿಯ ಜೀತವನ ಬುದ್ಧವಿಹಾರದ ಶ್ರೀವನರೇಬಲ್ ಮನೋರಿಕಿತ ಭಂತೇಜಿ, ಅಂಬೇಡ್ಕರ್ ವಾದಿ, ಚಿಂತಕಿ ದು.ಸರಸ್ವತಿ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಶಾಸಕರಾದ ನಯನಾಮೋಟಮ್ಮ, ಎಚ್.ಡಿ.ತಮ್ಮಯ್ಯ, ಸಿ.ಟಿ.ರವಿ, ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಸಮಾರಂಭಕ್ಕೆ ಆಗಮಿಸಲಿದ್ದಾರೆ ಎಂದರು.

ಸ್ವಾಗತ ಸಮಿತಿ ಮುಖಂಡ ಭೀಮಯ್ಯ ಮಾತನಾಡಿ, ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದ್ದು, ಮಾಗಡಿ ಕೈಮರದಿಂದ ಮೆರವಣಿಗೆ ಆಯೋಜಿಸಲಾಗಿದೆ. ದಲಿತ ಸಂಘರ್ಷ ಸಮಿತಿಯನ್ನು ಕಟ್ಟಿ ಬೆಳೆಸಿದವರಲ್ಲಿ ಒಬ್ಬರಾದ ಎಂ.ಡಿ.ಗAಗಯ್ಯ ಅವರ ಊರಿನ ಸಮೀಪದಲ್ಲೇ ಕಾರ್ಯಕ್ರಮ ನಡೆಸುತ್ತಿರುವುದು ಸಂಘಟನೆಯ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಮಾಗಡಿ ಮಂಜುನಾಥ, ಗೌಡನಳ್ಳಿ ಮಂಜುನಾಥ, ಸಣ್ಣಯ್ಯ, ವಕೀಲ ದೊಡ್ಡಯ್ಯ, ಕೀರ್ತಿ, ಟಿ.ಎಲ್.ಗಣೇಶ್, ರಾಕೇಶ್, ಭಾಸ್ಕರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net