ಅಂಬೇಡ್ಕರ್ ಜಯಂತಿ ದಿನನಿತ್ಯದ ಆಚರಣೆಯಾಗಲಿ

14 ckm 2
ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಪರಿಶಿಷ್ಟ ಜಾತಿ ಘಟಕ ಹಾಗೂ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಆಯೋಜಿಸಲಾಗಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಬಿ.ಎಂ.ಸAದೀಪ್, ಎಚ್.ಪಿ.ಮಂಜೇಗೌಡ, ಬಿ.ಎಚ್.ಹರೀಶ್, ಎಂ.ಸಿ.ಶಿವಾನAದ ಸ್ವಾಮಿ, ಎಂ.ಪಿ.ಕುಮಾರಸ್ವಾಮಿ, ತನೋಜ್ ಕುಮಾರ್ ನಾಯ್ಡು ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಅಂಬೇಡ್ಕರ್ ಜಯಂತಿ ಒಂದು ದಿನಕ್ಕೆ ಮಾತ್ರ ಸೀಮಿತವಾಗದೆ ಪ್ರತಿನಿತ್ಯ ಆಚರಣೆಯಾಗಬೇಕು. ಅವರ ಆದರ್ಶ, ಮೌಲ್ಯಗಳನ್ನು ಗ್ರಾಮೀಣ ಭಾಗದ ಜನರಿಗೆ ತಿಳಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸAದೀಪ್ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಪರಿಶಿಷ್ಟ ಜಾತಿ ಘಟಕ ಹಾಗೂ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಆಯೋಜಿಸಲಾಗಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಕಾಂಗ್ರೆಸ್ ಪಕ್ಷವು ಜಾತ್ಯಾತೀತ, ತತ್ವ ಸಿದ್ದಾಂತದ ಬಗ್ಗೆ ಚಿಂತನೆ ಮಾಡುತ್ತಿದೆ. ಆದರೆ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಸಾಮಾನ್ಯ ಜನರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ. ಕಾಂಗ್ರೆಸ್ ಸಂವಿಧಾನದ ಅಡಿಯಲ್ಲಿ ಕೆಲಸ ಮಾಡುತ್ತಿದ್ದು, ಜಾತ್ಯಾತೀತ ಪರಿಕಲ್ಪನೆಯನ್ನು ಹೊಂದಿದೆ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ ಮಾತನಾಡಿ, ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನ ಭಾರತಕ್ಕೆ ಮಾತ್ರವಲ್ಲದೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬAತೆ ಭಾರತದ ಸಂವಿಧಾನಕ್ಕೆ ಮಹತ್ತರವಾದ ಗೌರವಿದೆ ಎಂದು ಹೇಳಿದರು.

ಭಾರತದ ಪ್ರತಿಯೊಬ್ಬ ಪ್ರಜೆಗೂ ಅಂಬೇಡ್ಕರ್ ಅವರು ಆಸ್ತಿಯಾಗಿದ್ದಾರೆ. ಸಮ ಸಮಾಜವನ್ನು ನಿರ್ಮಾಣ ಮಾಡಬೇಕು ಎಂಬುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯವಾಗಿತ್ತು. ಈ ನಿಟ್ಟಿನಲ್ಲಿ ನಾವೆಲ್ಲರೂ ಅವರ ಆದರ್ಶ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಾ.ಡಿ.ಎಲ್.ವಿಜಯಕುಮಾರ್ ಮಾತನಾಡಿ, ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡದೇ ಇರದಿದ್ದರೆ ದೇಶದಲ್ಲಿ ಸಾಮಾನ್ಯ ಜನರು ಬದುಕಲು ಆಗುತ್ತಿರಲಿಲ್ಲ. ಮಾನವ ಧರ್ಮವನ್ನು ಗೌರವಿಸುವ ಸ್ಥಿತಿ ಇಂದು ನಿರ್ಮಾಣವಾಗಲು ಮೂಲ ಕಾರಣ ಅಂಬೇಡ್ಕರ್ ಎಂದು ಹೇಳಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪಗೌಡ ಮಾತನಾಡಿ, ಅಂಬೇಡ್ಕರ್ ಅವರ ಆದರ್ಶ ಮೌಲ್ಯ ಎಲ್ಲರಿಗೂ ದಾರಿದೀಪ. ದೇಶದ ಮೂಲೆ ಮೂಲೆಯಲ್ಲೂ ಇಂದು ಅಂಬೇಡ್ಕರ್ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಮಾತನಾಡಿ, ಅಂಬೇಡ್ಕರ್ ಅವರು ಒಂದು ಜಾತಿಗೆ ಸೀಮಿತವಾಗಿಲ್ಲ. ಅವರನ್ನು ಪ್ರತಿದಿನ ನೆನಪು ಮಾಡಿಕೊಳ್ಳುವಂತಾಗಬೇಕು. ದೇಶದಲ್ಲಿ ಅಸ್ಪಶ್ಯತೆಯನ್ನು ತೊಡೆದು ಹಾಕಲು ಶ್ರಮಿಸಿದ ಮಹಾನ್ ನಾಯಕರಾಗಿದ್ದಾರೆ ಎಂದರು.

ಇAದು ದೇಶದ ಎಲ್ಲಾ ಹಳ್ಳಿಗಳಲ್ಲೂ ಅವರ ವಿಚಾರಧಾರೆಗಳನ್ನು ಅನುಸರಿಸುತ್ತಿದ್ದಾರೆ. ಅಂಬೇಡ್ಕರ್ ಅವರು ನಮಗೆ ಕೊಟ್ಟಿರುವಂತ ಸಂವಿಧಾನದಿAದ ಮಾತ್ರ ದೇಶದ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಸಾಧನೆ ಮಾಡಲು ಪ್ರೇರಣೆಯಾಗಿದೆ ಎಂದು ಹೇಳಿದರು.

ರಾಜ್ಯ ಕೆಪೆಕ್ಸ್ ಅಧ್ಯಕ್ಷ ಬಿ.ಎಚ್.ಹರೀಶ್ ಮಾತನಾಡಿ, ಅಂಬೇಡ್ಕರ್ ಅವರು ದೇಶದ ಎಲ್ಲ ಜನಾಂಗದವರಿಗೆ ಸಮನಾದ ಮೀಸಲಾತಿಯನ್ನು ನೀಡಿದ್ದಾರೆ. ವಿಧ್ಯೆಯಲ್ಲಿ ತೊಡಗಿಸಿಕೊಂಡವರು ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಮಲ್ಲೇಶಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನAದಸ್ವಾಮಿ, ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ಪ್ರಚಾರ ಸಮಿತಿ ಅಧ್ಯಕ್ಷ ಸೈಯದ್ ಹನೀಪ್, ನಗರ ಕಾಂಗ್ರೆಸ್ ಅಧ್ಯಕ್ಷ ತನೋಜ್ ನಾಯ್ಡು, ಕಾರ್ಯದರ್ಶಿ ಈಶ್ವರಪ್ಪ, ಪ್ರಧಾನ ಕಾರ್ಯದರ್ಶಿಗಳಾದ ರಾಜಕುಮಾರ್, ಧರ್ಮೇಶ್, ರಾಜ್ಯ ಎಸ್‌ಸಿ ಘಟಕ ರಾಜ್ಯ ಸಂಚಾಲಕಿ ನೇತ್ರಾವತಿ, ಆಶ್ರಯ ಸಮಿತಿ ಸದಸ್ಯೆ ಯಶೋಧ, ಜಿಲ್ಲಾ ಮಹಿಳಾ ಘಟಕ ಉಪಾಧ್ಯಕ್ಷೆ ಹೇಮಾವತಿ, ಮಂಜುಳ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net