

ಚಿತ್ರದುರ್ಗ: ಮಧ್ಯ ಕರ್ನಾಟಕದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತ್ಯುತ್ಸವ ಆಚರಣೆ ಸಂಬಂಧ ಛಲವಾದಿ ಗುರುಪೀಠದಲ್ಲಿ ಏ. 28ರಂದು ಬೆಳಗ್ಗೆ 11ಕ್ಕೆ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಶ್ರೀ ಬಸವನಾಗೀದೇವ ಸ್ವಾಮೀಜಿ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯ ಎಲ್ಲ ಸಂಘ-ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳು ಆಗಮಿಸಿ ಸೂಕ್ತ ಸಲಹೆ ನೀಡಬೇಕು ಎಂದು ಮನವಿ ಮಾಡಿದರು.
ಅಪಾರ ಜ್ಞಾನ ಹೊಂದಿದ್ದ ಅಂಬೇಡ್ಕರ್ ಜಯಂತಿಯನ್ನು ಅತ್ಯಂತ ವಿಶೇಷ ಹಾಗೂ ಸಾಮೂಹಿಕವಾಗಿ ಎಲ್ಲರೂ ಸೇರಿ ಆಚರಿಸಬೇಕು ಎಂಬ ಉದ್ದೇಶದಿಂದ ಸಭೆ ಕರೆಯಲಾಗಿದೆ ಎಂದರು.
ವಿವಿಧ ಸಂಘಟನೆ ಮುಖಂಡರಾದ ಪ್ರಭಾಕರ್, ಗುರುಮೂರ್ತಿ, ಎಸ್.ಎನ್.ವಿಶ್ವನಾರಾಯಣಮೂರ್ತಿ, ತಿಪ್ಪೇಸ್ವಾಮಿ, ಎಂ.ಕೆ.ಗಾಂಧಿ, ಅವಿನಾಶ್ ಇತರರಿದ್ದರು.