

ಬೀದರ್: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ 14ರಂದು ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಬೆಳಗ್ಗೆ 8ಕ್ಕೆ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ಡಿಸಿ ಕಚೇರಿಗೆ ಬರಬೇಕು. 8.30ಕ್ಕೆ ಡಿಸಿ ಕಚೇರಿ ಸಭಾಂಗಣದಲ್ಲಿ ಜಯಂತ್ಯುತ್ಸವ ಬಳಿಕ 9ಕ್ಕೆ ಅಂಬೇಡ್ಕರ್ ವೃತ್ತದ ಬಳಿ ಧ್ವಜಾರೋಹಣ ಮತ್ತು ಮಾಲಾರ್ಪಣೆ ಕಾರ್ಯಕ್ರಮ ಜರುಗಲಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಉಪ ನಿರ್ದೇಶಕರು ತಿಳಿಸಿದ್ದಾರೆ.