ಅಂಬೇಡ್ಕರ್ ತತ್ವಾದರ್ಶ ಮೈಗೂಡಿಸಿಕೊಳ್ಳಿ

14arsph1ep,,,,
Published on

ಹಾಸನ : ಸಂವಿಧಾನದ ಆಶೋತ್ತರಗಳಂತೆ ನಡೆದುಕೊಳ್ಳುವ ಹೊಣೆಗಾರಿಕೆ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದು ಬಿಜೆಪಿ ಮುಖಂಡ ಎನ್.ಆರ್. ಸಂತೋಷ್ ಹೇಳಿದರು.

ಅರಸೀಕೆರೆ ನಗರದ ಹಾಸನ ರಸ್ತೆಗೆ ಹೊಂದಿಕೊಂಡಂತಿರುವ ವೃತ್ತದಲ್ಲಿ ಪ್ರತಿಷ್ಠಾಪಿಸಲಾಗಿರುವ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಕಾನೂನು ಪಂಡಿತರಾಗಿ, ರಾಜಕಾರಣಿಯಾಗಿ, ಶೋಷಿತರ ದನಿಯಾಗಿ ಕೆಲಸ ಮಾಡಿದ ಪರಿಣಾಮ ಸಂವಿಧಾನದ ಆಶಯದಂತೆ ಹಕ್ಕುಗಳನ್ನು ಪಡೆಯಲು ಸಾಧ್ಯವಾಗಿದೆ. ಅವರ ತತ್ವ, ಆದರ್ಶ, ಚಿಂತನೆಗಳನ್ನು ಯುವ ಸಮುದಾಯ ಮೈಗೂಡಿಸಿಕೊಳ್ಳಬೇಕಿದೆ ಎಂದರು.

ನಗರಸಭೆ ಅಧ್ಯಕ್ಷ ಸಿ. ಗಿರೀಶ್, ಸದಸ್ಯ ಭಾಸ್ಕರ್, ನಗರ ಯೋಜನಾ ಪ್ರಾಧಿಕಾರದ ಮಾಜಿ ನಿರ್ದೇಶಕ ಶಿವನ್‌ರಾಜ್, ಮುಖಂಡ ರಮೇಶ್ ನಾಯ್ಡು ಸೇರಿ ಹಲವರು ಹಾಜರಿದ್ದರು. ತಾಲೂಕಿನ ವಿವಿಧ ಸರ್ಕಾರಿ ಕಚೇರಿಗಳು ಹಾಗೂ ಶಾಲಾ , ಕಾಲೇಜುಗಳಲ್ಲಿಯೂ ಭಾವಚಿತ್ರಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net