

ಕೊಳ್ಳೇಗಾಲ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ತಾಲೂಕು ಕಟ್ಟಡ ಕಾರ್ಮಿಕ ಸಂಘದ ಪದಾಧಿಕಾರಿಗಳು ಭಾನುವಾರ ಮಾಲಾರ್ಪಣೆ ಮಾಡುವ ಮೂಲಕ ಹೊಸ ವರ್ಷವನ್ನು ಸಂಭ್ರಮದಿಂದ ಆಚರಿಸಿದರು.
ಪಟ್ಟಣದ ಡಾ.ರಾಜ್‌ಕುಮಾರ್ ರಸ್ತೆಯಲ್ಲಿರುವ ಸಂಘದ ಕಚೇರಿಯಲ್ಲಿ ಸಮಾವೇಶಗೊಂಡ ಬಳಿಕ ಅಂಬೇಡ್ಕರ್ ರಸ್ತೆ ಮಾರ್ಗವಾಗಿ ಮೆರವಣಿಗೆ ಮೂಲಕ ಸಾಗಿ ಪ್ರತಿಮೆಗೆ ಗೌರವ ಸಲ್ಲಿಸಿದರು. ನಗರಸಭೆ ಅಧ್ಯಕ್ಷ, ಸದಸ್ಯರು, ಯಜಮಾನರು ಸಾಥ್ ನೀಡಿದರು.
ಸಂಘದ ಅಧ್ಯಕ್ಷ ಶಿವಣ್ಣ ಮಾತನಾಡಿ, ಸಂವಿಧಾನದಲ್ಲಿ ಕಾರ್ಮಿಕರ ಹಿತ ಕಾಯುವ ಕಾಯ್ದೆಗಳನ್ನು ಅಳವಡಿಸಿದ್ದಕ್ಕೆ ಪ್ರಸ್ತುತ ಕಾರ್ಮಿಕರು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗಿದೆ. ಆದ್ದರಿಂದ ಅಂಬೇಡ್ಕರ್ ಅವರಿಗೆ ಇಡೀ ದೇಶದ ಕಾರ್ಮಿಕರು ಋಣಿಯಾಗಿರಬೇಕು ಎಂದು ಹೇಳಿದರು.
ಭೀಮನಗರದ ಯಜಮಾನರಾದ ಚಿಕ್ಕಮಾಳಿಗೆ, ನಗರಸಭೆ ಅಧ್ಯಕ್ಷೆ ರೇಖಾ, ಪ್ರಥಮ ದರ್ಜೆ ಗುತ್ತಿಗೆದಾರ ಪುನೀತ್ ಮಹೇಶ್ವರ್ ಮಾತನಾಡಿದರು. ನಗರಸಭೆ ಮಾಜಿ ಅಧ್ಯಕ್ಷ ರಮೇಶ್, ಸದಸ್ಯ ಮಂಜುನಾಥ್, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಶಿವಣ್ಣ, ಉಪಾಧ್ಯಕ್ಷ ಲಿಂಗರಾಜು, ಕಾರ್ಯದರ್ಶಿ ಸಂದೀಪ್, ಖಂಜಾಚಿ ಶಿವರಾಳ, ನಿರ್ದೇಶಕ ಮಾದಪ್ಪ, ಲೋಕೇಶ್, ಸಿದ್ದಪ್ಪ, ಜಗದೀಶ್, ಬಸವಣ್ಣ ಮತ್ತಿತರಿದ್ದರು.