ಅಂಬೇಡ್ಕರ್ ಪ್ರತಿಮೆಗೆ ವಿರೂಪ ಖಂಡಿಸಿ ಪ್ರತಿಭಟನೆ

IMG-20250129-WA0035
Published on

ಚಾಮರಾಜನಗರ: ಪಂಜಾಬ್‌ನ ಅಮೃತಸರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ವಿರೂಪಗೊಳಿಸಿರುವುದನ್ನು ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ.ಬಿ. ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು  ಅಂಬೇಡ್ಕರ್ ಪ್ರತಿಮೆ ಮಾಲಾರ್ಷಣೆ ಮಾಡಿ ಕೆಲಹೊತ್ತು ಪುತ್ತಳಿ ಒಪ್ಪಿಕೊಂಡು ಕೆಲಕಾಲ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ ಮಾತನಾಡಿ, ಪಂಜಾಬ್‌ನ ಅಮೃತಸರದಲ್ಲಿ ಕಿಡಿಗೇಡಿಯೊಬ್ಬ ಸಂವಿಧಾನ ಶಿಲ್ಪಿ ಡಾ.ಬಿ.ಆ‌ರ್.ಅಂಬೇಡ್ಕರ್ ಅವರ ಪ್ರತಿಮೆಯ ಮೇಲೆ ಹತ್ತಿ ಸುತ್ತಿಗೆಯಿಂದ ಒಡೆದು ವಿರೂಪಗೊಳಿಸಲಾಗಿದೆ. ಅಂಬೇಡ್ಕರ್ ಅವರನ್ನು ಎಷ್ಟೇ ವಿರೋಧ ಮಾಡಿದರು. ಅವರ ಪ್ರತಿಮೆಗಳನ್ನು ವಿರೂಪಗೊಳಿಸಿದರು ಹೆಚ್ಚು ಹೆಚ್ಚು ಅಂಬೇಡ್ಕರ್ ಅಭಿಮಾನಿಗಳು ಅವರನ್ನು ಅಪ್ಪಿಕೊಳ್ಳುವ ಕೆಲಸ ಮಾಡುತ್ತೇವೆ ಎಂದರು.

ಪ್ರತಿಮೆ ವಿರೂಪಗೊಳಿಸಿರುವ ಕಿಡಿಗೇಡಿ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿ ಶಾಶ್ವತವಾಗಿ ಜೈಲಿನಲ್ಲಿಯೇ ಇರುವಂತೆ ಮಾಡಬೇಕು. ಅಂಬೇಡ್ಕರ್ ಅವರಿಗೆ ಯಾರೇ ಅವಮಾನ ಮಾಡಿದರು ಸಹಿಸಿಕೊಳ್ಳುವುದಕ್ಕೆ ಆಗುವುದಿಲ್ಲ. ಪ್ರಾಣ ಹೋದರು ಅಂಬೇಡ್ಕ‌ರ್ ಸಿದ್ದಾಂತವನ್ನು ಉಳಿಸಿಕೊಳ್ಳಲು ಮುಂದಾಗುತ್ತೇವೆ. ಸಂವಿಧಾನ ವಿರೋಧಿಗಳು ಸುಮ್ಮನಿರದಿದ್ದರೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಸಿ.ಎಂ.ಶಿವಣ್ಣ, ಕಂದಹಳ್ಳಿ ನಾರಾಯಣ, ಆಟೋ ಉಮೇಶ್, ಬಸವರಾಜು, ಮಾದಾಪುರ ಸಿದ್ದರಾಜು, ಗಾಯಕ ಶಿವಣ್ಣ ಸೇರಿದಂತೆ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net