ಅಂಬೇಡ್ಕರ್ ಭವನ ಪೂರ್ಣಗೊಳಿಸಲು ಆಗ್ರಹಿಸಿ ಎಎಪಿ ಕಾರ್ಯಕರ್ತರ ಪ್ರತಿಭಟನೆ

mysore
Published on

ಮೈಸೂರು: ಸ್ಥಗಿತಗೊಂಡಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಒತ್ತಾಯಿಸಿ ಆಮ್ ಆದ್ಮಿ ಪಾರ್ಟಿ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು.

ದಿವಾನ್ಸ್ ರಸ್ತೆಯಲ್ಲಿರುವ ಅಂಬೇಡ್ಕರ್ ಭವನದ ಎದುರು ಜಮಾವಣೆಗೊಂಡ ಪ್ರತಿಭಟನಾಕಾರರು, ಸರ್ಕಾರ ಮತ್ತು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಳೆದ 8 ವರ್ಷಗಳಿಂದ ಕಾಮಗಾರಿ ಸ್ತಬ್ಧವಾಗಿದೆ.

ಭಾಷಣಕ್ಕೆ ಮತ್ತು ಮತ ಗಳಿಕೆಗೆ ಮಾತ್ರ ಅಂಬೇಡ್ಕರ್ ಬೇಕು. ಅವರ ಹೆಸರಿನಲ್ಲಿ ಭವನ ನಿರ್ಮಿಸಿ, ಕಸ ಕಡ್ಡಿಗಳನ್ನು ಹಾಕಲು ಖಾಲಿ ಬಿಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಿಗೆ ಒಮ್ಮೆಯಾದರೂ ಭವನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲು ಸಮಯವೇ ಸಿಕ್ಕ್ಕಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧ್ಯಕ್ಷ ರಂಗಯ್ಯ, ಸಂಘಟನ ಕಾರ್ಯದರ್ಶಿ ವಿಶ್ವನಾಥ ಕುಲಕರ್ಣಿ, ನಗರ ಘಟಕದ ಅಧ್ಯಕ್ಷ ಸೋಮಶೇಖರ್, ಯುವ ಘಟಕದ ಅಧ್ಯಕ್ಷ ಅನಂತರಾಜ್ ಸೂರ್ಯ, ಮಾಲವಿಕ ಗುಬ್ಬಿವಾಣಿ, ಉಷಾ ಸಂಪತ್‌ಕುಮಾರ್ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net