ಅಂಬೇಡ್ಕರ್ ವಸತಿ ಯೋಜನೆಯಡಿ ಸೌಲಭ್ಯ

11 SIRAGUPPA 01
Published on

ಸಿರಗುಪ್ಪ: ಪರಿಶಿಷ್ಟ ಜಾತಿ ಮತ್ತು ಪಂಗಡದ ಅಲೆಮಾರಿ ಸಮುದಾಯಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ತಿಳಿಸಿದರು.

ತಾಲೂಕಿನ 64 ಹಳೆಕೋಟೆ ಗ್ರಾಪಂ ವ್ಯಾಪ್ತಿಯ ಸಿದ್ದಪ್ಪ ನಗರದ ಬುಡ್ಗ ಜಂಗಮ ಅಲೆಮಾರಿ ಸಮುದಾಯದ ವಾಸಸ್ಥಳಕ್ಕೆ ಭೇಟಿ ನೀಡಿ ಕುಂದು-ಕೊರತೆಗಳನ್ನು ಪರಿಶೀಲಿಸಿ ಸೋಮವಾರ ಮಾತನಾಡಿದರು. ಸ್ಥಳೀಯ ಅಲೆಮಾರಿ ಸಮುದಾಯದವರು ಸ್ವಂತ ಹಣದಲ್ಲಿ ಜಮೀನು ಖರೀದಿಸಿ ಜೋಪಡಿಯಲ್ಲಿ ವಾಸ ಮಾಡುತ್ತಿದ್ದಾರೆ. ಸೌಲಭ್ಯಗಳನ್ನು ನೀಡುವಂತೆ ಅನೇಕ ಬಾರಿ ಸರ್ಕಾರಿ ಅಧಿಕಾರಿಗಳಿಗೆ ಮನವಿ ನೀಡಿದರೂ ಸ್ಪಂದನೆ ಸಿಕ್ಕಿಲ್ಲ. ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಯ 112 ಕೋಟಿ ರೂ.ಯಲ್ಲಿ ಅರ್ಜಿ ಕರೆದು ವಸತಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಬುಡ್ಗ ಜಂಗಮ ಸಮಾಜದ ತಾಲೂಕು ಅಧ್ಯಕ್ಷ ಬಿ.ಜಂಬಣ್ಣ ಮಾತನಾಡಿ, ಬೀದಿ ವ್ಯಾಪಾರ, ಪಾತ್ರೆ , ಚಿಕ್ಕಮಕ್ಕಳ ಉಡುಪುಗಳು, 10 ರೂಪಾಯಿ ಬೆಲೆಯ ಸಾಮಾನು ಮಾರಾಟ ಮಾಡಿ ಜೀವನ ಸಾಗಿಸಲಾಗುತ್ತಿದೆ. ನಮ್ಮ ಬಡಾವಣೆಯಲ್ಲಿ ಕುಡಿಯುಲು ನೀರಿಲ್ಲ. ರಸ್ತೆ ಅಭಿವೃದ್ಧಿ ಇಲ್ಲ. ಜೋಪಡಿಗಳಿಗೆ ವಿದ್ಯುತ್ ಸರಬರಾಜು ಇಲ್ಲ. ಸರ್ಕಾರದ ವಿವಿಧ ಸೌಲಭ್ಯಗಳಿಗೆ ಅರ್ಜಿ ಹಾಕಿದರೂ ಸ್ಪಂದನೆ ಇಲ್ಲ. ಮೂಲ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ.ಮಲ್ಲಿಕಾರ್ಜುನ, ಸಹಾಯಕ ನಿರ್ದೇಶಕ ಎಂ.ಸಿದ್ದಯ್ಯ, ಗ್ರೇಡ್-2 ತಹಶೀಲ್ದಾರ್ ಸತ್ಯಮ್ಮ, ತಾಪಂ ಸಹಾಯಕ ನಿರ್ದೇಶಕ ಬಸವರಾಜ, ಸಿಪಿಐ ಚಂದನ ಗೋಪಾಲ, ಪಿಎಸ್‌ಐ ತಾರಾಬಾಯಿ, ನಗರಸಭೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net