ಅಂಬೇಡ್ಕರ್ ವಿರೋಧಿಗಳು ದೇಶದ್ರೋಹಿಗಳು

IMG_20241224_130930
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.5717593, 0.15487501);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 48;
Published on

ಚಾಮರಾಜನಗರ: ಈ ದೇಶದ ಸಂವಿಧಾನವನ್ನು ವಿರೋಧಿಸುವವರು, ಸಂವಿಧಾನ ಶಿಲ್ಪಿಯನ್ನು ವಿರೋಧ ಮಾಡಿದಂತೆ ಎಂದು ಸುಪ್ರೀಂಕೋರ್ಟ್ ಹೇಳಿದ್ದು, ಅಂತವರು ಯಾರೇ ಆದರೂ ಆತ ದೇಶದ್ರೋಹಿಯಾಗುತ್ತಾನೆ ಎಂದು ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಮುಂಭಾಗ ತಾಲೂಕು ಆದಿ ಕರ್ನಾಟಕ ಅಭಿವೃದ್ಧಿ ಸಂಘ, ಪರಿಶಿಷ್ಟ ಜಾತಿ ಯಜಮಾನರು, ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ಪರಿಶಿಷ್ಟ ಜಾತಿ ಜನರಿಗೆ ಮಾತ್ರ ಸಂವಿಧಾನದಲ್ಲಿ ಅವಕಾಶಗಳನ್ನು ಕಲ್ಪಿಸಲಿಲ್ಲ. ಪ್ರತಿಯೊಬ್ಬ ನಾಗರೀಕನಿಗೂ ಅನ್ವಯವಾಗುವಂತೆ ಸಂವಿಧಾನವನ್ನು ಕೊಡುಗೆಯಾಗಿ ನೀಡಿದರು. ಅಂಬೇಡ್ಕರ್ ಅಂದರೇ ಕೇವಲ ಪರಿಶಿಷ್ಟ ಜಾತಿಯವರಿಗೆ ಸೀಮಿತ ಎಂಬ ಮನೋಭಾವನೆ ಇಂದಿಗೂ ಇದೆ. ಆದರೇ ಪ್ರತಿಯೊಂದು ಧರ್ಮ ಮತ್ತು ಜಾತಿಯವರು ಸಂವಿಧಾನದಲ್ಲಿ ಮೀಸಲಾತಿ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ದೇಶದ ಗೃಹ ಸಚಿವರು ಇಂತಹ ಹೇಳಿಕೆ ನೀಡಿರುವುದು ಸರಿಯಲ್ಲ. ಬಿಜೆಪಿಯಲ್ಲಿರುವ ಶಾಸಕರು, ಸಚಿವರು ರಾಜೀನಾಮೆ ನೀಡಬೇಕು. ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ಅಮಾನತ್ತುಗೊಳಿಸಬೇಕೆಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net