ಅಕ್ಕಮಹಾದೇವಿ ಮಹಿಳಾ ವಿವಿ ಕುಲಪತಿಯಾಗಿ ಪ್ರೊ.ತುಳಸಿಮಾಲಾ ನೇಮಕ

IMG-20210122-WA0120
Published on

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪ್ರೊ.ಬಿ.ಕೆ.ತುಳಸಿಮಾಲಾ ಅವರನ್ನು ನೇಮಕ ಮಾಡಿ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ವಜುಬಾಯಿ ವಾಲಾ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿರುವ ಪ್ರೊ.ತುಳಸಿಮಾಲಾ ಅವರು, ಪ್ರಸ್ತುತ ಬಳ್ಳಾರಿಯ ಶ್ರೀ.ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರೊ.ತುಳಸಿಮಾಲಾ ಅವರು ಅಧಿಕಾರ ವಹಿಸಿಕೊಂಡ ದಿನದಿಂದ ನಾಲ್ಕು ವರ್ಷಗಳ ವರೆಗೆ ಅಧಿಕಾರಾವಧಿ ಇರುತ್ತದೆ ಎಂದು ರಾಜ್ಯಪಾಲರ ಆದೇಶದಲ್ಲಿ ತಿಳಿಸಲಾಗಿದೆ.

ನೂತನ ಕುಲಪತಿಗಳಾಗಿ ನೇಮಕವಾಗಿರುವ ಪ್ರೊ.ಬಿ.ಕೆ.ತುಳಸಿಮಾಲಾ ಅವರನ್ನು ಮಹಿಳಾ ವಿಶ್ವವಿದ್ಯಾನಿಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net