

ವಿರಾಜಪೇಟೆ: ಬಿಪಿಲ್ ಪಡಿತರದಾರರಿಗೆ ಸರ್ಕಾರ ಹೆಚುವ್ಚರಿ ಒಂದು ಕೆಜಿ ಅಕ್ಕಿಯೊಂದಿಗೆ ಒಟ್ಟು ಆರು ಕೆಜಿ ಅಕ್ಕಿ ಉಚಿತವಾಗಿ ನೀಡುತ್ತಿದ್ದು, ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ಇದನ್ನು ಫಲಾನುಭವಿಗಳಿಗೆ ನೀಡದೆ ವಂಚಿಸಲಾಗುತ್ತಿದೆ. ಹಾಗಾಗಿ ಈ ಬಗ್ಗೆ ಕ್ರಮವಹಿಸಿ ಎಂದು ಶಾಸಕ ಕೆ.ಜಿ.ಬೋಪಯ್ಯ ತಹಸೀಲ್ದಾರ್ ಅರ್ಚನಾ ಭಟ್ ಅವರಿಗೆ ಸೂಚನೆ ನೀಡಿದರು.
ಇಲ್ಲಿನ ಮಹಿಳಾ ಸಮಾಜ ಸಭಾಂಗಣದಲ್ಲಿ ಗುರುವಾರ ಕಂದಾಯ ಇಲಾಖೆಯಿಂದ ಆಯೋಜಿಸಿದ್ದ ಹಕ್ಕು ಪತ್ರ ಮತ್ತು ಪಿಂಚಣಿ ಸೌಲಭ್ಯ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ರಾಜ್ಯ ಮತ್ತು ಕೇಂದ್ರ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದನ್ನು ಸದುಪಯೋಗಪಡಿಸಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದರು.
2005ಕ್ಕಿಂತ ಮುಂಚಿತವಾಗಿ ಸರ್ಕಾರಿ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಆ ಜಾಗವನ್ನು ಗುತ್ತಿಗೆ ನೀಡುವ ಮೂಲಕ ಕೃಷಿಗೆ ಪ್ರೋತ್ಸಾಹ ನೀಡುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ 1.34 ಕೋಟಿ ರೂ. ಪರಿಹಾರವನ್ನು 46 ಸಾವಿರ ರೈತರಿಗೆ ನೀಡಲಾಗಿದೆ. ಇನ್ನೂ ಹೆಚ್ಚುವರಿಯಾಗಿ ಆರು ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು ಎಂದು ಹೇಳಿದರು
ವಿರಾಜಪೇಟೆ ತಾಲೂಕು ಬಗರ್‌ಹುಕುಂ ಸಮಿತಿ ಅಧ್ಯಕ್ಷ ಗಿರೀಶ್‌ಗಣಪತಿ ಮಾತನಾಡಿದರು. ಬಗರ್‌ಹುಕುಂ ಸಮಿತಿ ಸದಸ್ಯರಾದ ಮಾಪಂಗಡ ಯಮುನ ಚಂಗಪ್ಪ , ಲಾಲಭೀಮಯ್ಯ, ಕಂದಾಯ ಪರೀವಿಕ್ಷಕ ಹರೀಶ್ ಉಪಸ್ಥಿತರಿದ್ದರು.