ಅಕ್ರಮ ಕಲ್ಲುಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳಿ

10 05
Published on

ತುರುವೇಕೆರೆ: ಅಕ್ರಮ ಕಲ್ಲುಗಣಿಗಾರಿಕೆ ನಡೆಸುತ್ತಿರುವ ಕ್ರಷರ್​ ಮಾಲೀಕರ ವಿರುದ್ಧ ಜಿಲ್ಲಾ, ತಾಲೂಕು ಆಡಳಿತ ಕೂಡಲೇ ಕ್ರಮ ಕೈಗೊಂಡು ಕ್ರಷರ್​ ಯಂತ್ರ ತೆರವುಗೊಳಿಸಬೇಕು. ಇಲ್ಲದಿದ್ದಲ್ಲಿ ರೈತರೇ ತೆರವುಗೊಳಿಸಬೇಕಾಗುತ್ತದೆ ಎಂದು ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ ಆರಾದ್ಯ ಎಚ್ಚರಿಸಿದರು.

ತಾಲೂಕಿನ ಕೋಳಘಟ್ಟದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಕ್ರಷರ್​ ಮಾಲೀಕನ ವಿರುದ್ಧ ಗ್ರಾಮಸ್ಥರು ನಡೆಸುತ್ತಿರುವ ಆಹೋರಾತ್ರಿ ಪ್ರತಿಭಟನೆಯಲ್ಲಿ ಶುಕ್ರವಾರ ಭಾಗವಹಿಸಿ ಮಾತನಾಡಿ, ಈ ಭಾಗದ ರೈತರಿಗೆ ಮಾರಕವಾಗಿರುವ ಕಲ್ಲು ಕ್ರಷರ್​ ಸ್ಥಗಿತಗೊಳಿಸುವಂತೆ ಕೋಳಘಟ್ಟ ಭಾಗದ ರೈತರು ಹೋರಾಟ ಮಾಡುತ್ತಿದ್ದರೂ ಜಿಲ್ಲಾ, ತಾಲೂಕು ಆಡಳಿತ, ದಂಡಿನಶಿವರ ಪೊಲೀಸರು ಮತ್ತು ಗಣಿಗಾರಿಕೆ ಇಲಾಖಾ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಜಿಲ್ಲಾದಿಕಾರಿಗಳಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಅಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳದಿದ್ದರೆ ಸಾವಿರಾರು ರೈತರೇ ಸ್ವಯಂ ಪ್ರೇರಿತರಾಗಿ ಕ್ರಷರ್​ಗೆ ಮುತ್ತಿಗೆ ಹಾಕಿ ಯಂತ್ರಗಳನ್ನು ಕಿತ್ತು ಹಾಕಲಾಗುವುದು. ಮುಂದಿನ ಅನಾಹುತಕ್ಕೆ ಜಿಲ್ಲಾಡಳಿತವೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net