ಅಕ್ರಮ ಪಡಿತರ ಅಕ್ಕಿ ದಾಸ್ತಾನು ವಶ

...
Published on

ಬಳ್ಳಾರಿ : ನಗರದ ಹೊರವಲಯದ ಗುಗ್ಗರಹಟ್ಟಿಯ ನ್ಯಾಯಬೆಲೆ ಅಂಗಡಿ ಬದಿಯಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಸುಮಾರು 750 ಚೀಲ ಪಡಿತರ ಅಕ್ಕಿಯನ್ನು ಅಹಾರ ಇಲಾಖೆಯು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಶಪಡಿಸಿಕೊಂಡು ಮುಂದಿನ ಅಗತ್ಯ ಕ್ರಮ ವಹಿಸಿದೆ.
ವಶಪಡಿಸಿಕೊಳ್ಳಲಾದ ಪಡಿತರ ಅಕ್ಕಿಯನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿದ್ದು, ಸಂಬಂಧಿಸಿದ ನ್ಯಾಯಬೆಲೆ ಅಂಗಡಿಯ ಪರವಾನಿಗೆಯನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಅಕ್ರಮ ಪಡಿತರ ಅಕ್ಕಿಯನ್ನು ಸಾಗಾಣೆ ಮಾಡುತ್ತಿದ್ದ ಲಾರಿಯನ್ನು ನಗರದ ಎಪಿಎಂಸಿ ಠಾಣೆಯಲ್ಲಿ ವಶಪಡಿಸಿಕೊಂಡು ಎಫ್‍ಐಆರ್ ದಾಖಲಿಸಲಾಗಿದೆ. ಎಡಿಸಿ ಮಹಮ್ಮದ್ ಝುಬೇರ್ , ಆಹಾರ ಇಲಾಖೆ ಉಪನಿರ್ದೇಶಕಿ ಸಕೀನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net