ಅಕ್ರಮ ಮದ್ಯ 179 ಪ್ರಕರಣ ದಾಖಲು

SP Dharmendarkumar meena
Published on

ಚಿತ್ರದುರ್ಗ: ಪ್ರಸಕ್ತ ಸಾಲಿನಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವವರ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದ್ದು, ಒಟ್ಟು 179 ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್‌ಕುಮಾರ್ ಮೀನಾ ತಿಳಿಸಿದ್ದಾರೆ.

ಸರ್ಕಾರದಿಂದ ಪರವಾನಗಿ ಪಡೆಯದೆ, ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವ ಕುರಿತು ಮಾಹಿತಿ, ದೂರು ಬಂದ ಕೂಡಲೇ ಖಚಿತಪಡಿಸಿಕೊಂಡು ದಾಳಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗುರುವಾರ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲ ಠಾಣೆಯ ಬೀಟ್ ಸಿಬ್ಬಂದಿ ಗ್ರಾಮದಲ್ಲಿ ಗಸ್ತು ನಡೆಸುತ್ತಿದ್ದಾರೆ. ಪರವಾನಗಿ ಪಡೆಯದೆ, ಮದ್ಯ ಮಾರಾಟ ಮಾಡುವವರ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದರ ಜೊತೆಗೆ ಅಂಗಡಿ ಮಾಲೀಕರಿಗೆ ಅರಿವು ಮೂಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net