

ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಕಣ್ಣೂರು ಗ್ರಾಮದ ಭೈರಲಿಂಗಯ್ಯ (40) ಬಂಧಿತ ಆರೋಪಿ. ಈತ ಬೆಳಗ್ಗೆ 9 ಗಂಟೆಗೆ ಮ.ಬೆಟ್ಟದ ವಜ್ರಮಲೆ ಭವನ ಮುಂಭಾಗದ ತೋಟಗಾರಿಕೆ ಇಲಾಖೆಗೆ ಸೇರಿದ ಜಾಗದಲ್ಲಿ ಸಾರ್ವಜನಿಕರಿಗೆ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಇನ್ಸ್‌ಪೆಕ್ಟರ್ ಜಗದೀಶ್ ಹಾಗೂ ಸಿಬ್ಬಂದಿ ತಂಡ ಸ್ಥಳಕ್ಕೆ ಭೇಟಿ ನೀಡಿ ಕೈ ಚೀಲವನ್ನು ಪರಿಶೀಲಿಸಿದಾಗ 90 ಮಿಲಿ ಲೀಟರ್‌ನ 35 ಮದ್ಯದ ಪೌಚ್‌ಗಳನ್ನು ವಶಕ್ಕೆ ಪಡೆಯಲಾಯಿತು. ಆರೋಪಿಯನ್ನು ಬಂಧಿಸಿರುವ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.