ಅಕ್ರಮ ಮದ್ಯಮಾರಾಟ ಮಾಡಿದ ಆರೋಪಿಗೆ 3 ವರ್ಷ ಶಿಕ್ಷೆ

Law & Order Court
Published on

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ವಡ್ರಾಳ ಗ್ರಾಮದಲ್ಲಿ ಅಕ್ರಮವಾಗಿ ಮದ್ಯಮಾರಾಟ ಮಾಡಿ ಸಿಕ್ಕಿಬಿದ್ದ ಆರೋಪಿಗೆ ಚಿಕ್ಕೋಡಿ ಪ್ರಧಾನ ನ್ಯಾಯಾಲಯ 3 ವರ್ಷ ಶಿಕ್ಷೆ ಹಾಗೂ 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಅಪ್ಪಯ್ಯ ಲಕ್ಷ್ಮಣ ಹೀರಾಬಾಳೆ ಎಂಬಾತನೇ ಶಿಕ್ಷೆಗೆ ಗುರಿಯಾಗಿರುವ ಕೈದಿ. ಈತ ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಸಂದರ್ಭದಲ್ಲಿ ಚಿಕ್ಕೋಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ. ಪೊಲೀಸರು ಪ್ರಕರಣ ದಾಖಲಿಸಿಕೊಂಡು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಚಿಕ್ಕೋಡಿಯ ಪ್ರಿನ್ಸಿಪಲ್ ನ್ಯಾಯಾಲಯದ ನ್ಯಾಯಾಧೀಶ ಚಿದಾನಂದ ಬಡಿಗೇರ ಅವರು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕ ಬಸವರಾಜ ಬಸವಂತ ಅವರು ವಕಾಲತ್ತು ವಹಿಸಿದ್ದರು ಎಂದು ನ್ಯಾಯಾಲಯದ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net