ಅಕ್ರಮ ಮರಳು ದಂಧೆಗೆ ಎಫ್‌ಐಆರ್ ಹಾಕಿ

Published on

ಯಾದಗಿರಿ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣೆ ಮತ್ತು ದೂರು ಬಂದಲ್ಲಿ ತಕ್ಷಣ ಅಂತಹವರ ವಿರುದ್ಧ ಎಫ್‌ಐಆರ್ ದಾಖಲಿ ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಕರೆದಿದ್ದ ಜಿಲ್ಲಾ ಮಟ್ಟದ ಮರಳು ಮಾನಿಟರಿಂಗ್ ನಿಯಂತ್ರಣ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮರಳು ಸಾಗಾಣೆಯಲ್ಲಿ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಅಕ್ರಮ ಮರಳು ದಂಧೆ ನಿಯಂತ್ರಿಸಬೇಕು ಎಂದು ತಾಕೀತು ಮಾಡಿದರು.
ಕಂದಾಯ, ಲೋಕೋಪಯೋಗಿ, ಗಣಿ ಮತ್ತು ಭೂ ವಿಜ್ಞಾನ, ಆರ್‌ಟಿಒ, ಪರಿಸರ ನಿಯಂತ್ರಣ ಮಂಡಳಿ ಹೀಗೆ ಎಲ್ಲ ಇಲಾಖೆ ಅಧಿಕಾರಿಗಳು ಸಂಘಟಿತರಾಗಿ ಗಸ್ತು ಮಾಡುವ ಮೂಲಕ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣ ಮತ್ತು ಸಾಗಾಣೆ ತಡೆಯಲು ಮುಂದಾಗಬೇಕು ಎಂದರು.

ದAಡ ವಿಧಿಸಿದರೆ ಅದರ ಪರಿಣಾಮ ಹೇಗಿರಬೇಕು ಎಂದರೆ ಮತ್ತೊಮ್ಮೆ ಅಕ್ರಮ ಮರಳು ಸಾಗಾಣೆಗೆ ಮುಂದಾಗಿರಬಾರದು. ಆ ನಿಟ್ಟಿನಲ್ಲಿ ಮುಲಾಜಿಲ್ಲದೆ ದುಪ್ಪಟ್ಟು ದಂಡ ವಿಧಿಸಿ ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅಕ್ರಮ ಮರಳು ಸಂಗ್ರಹಿಸಿಟ್ಟುಕೊAಡರೆ ಆ ಪ್ರಕರಣ ಮತ್ತಷ್ಟು ಗಂಭೀರವಾಗಿ ಪರಿಗಣಿಸಬೇಕು. ತಹಸೀಲ್ದಾರರು ಮತ್ತು ಪೊಲೀಸ್ ಸಿಬ್ಬಂದಿ ಕ್ರಮಕ್ಕೆ ಮುಂದಾಗಬೇಕು. ಜಿಲ್ಲೆಯಲ್ಲಿ ಈ ಕುರಿತು ಸಾರ್ವಜನಿಕರಿಂದ ದೂರು ಬರುತ್ತಿವೆ. ಅಧಿಕಾರಿಗಳು ಸಮಪರ್ಕವಾಗಿ ನಿರ್ವಹಣೆ ಮಾಡಿ ಕಾನೂನಿನ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು. ಹಾಗೊಂದು ವೇಳೆ ನಿರ್ಲಕ್ಷö್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅಕ್ರಮ ಸಾಗಾಣೆಯಲ್ಲಿ ಭಾಗಿಯಾಗುವ ವಾಹನಗಳನ್ನು ಆರ್‌ಟಿಒ ಮತ್ತು ಸಂಬAಧಿಸಿದ ಅಧಿಕಾರಿಗಳು ಸೀಜ್ ಮಾಡಬೇಕು. ರಾಯಲ್ಟಿಕ್ಕಿಂತ ಹೆಚ್ಚಿನ ಟ್ರಿಪ್ ಸಾಗಾಣಿಕೆಯಾಗದಂತೆ ನಿಗಾ ವಹಿಸಬೇಕು. ಜಿಪಿಎಸ್ ಅಳವಡಿಸಿಕೊಂಡಿರುವ ಲಾರಿಗಳಿಗೆ ಮಾತ್ರ ಮರಳು ಸಾಗಾಣೆಗೆ ಅವಕಾಶ ನೀಡಿ, ಅಕ್ರಮವಾಗಿ ಸಾಗಾಣೆ ಮಾಡಿ ನಿಯಮ ಉಲ್ಲಂಘಿಸುವ ಲಾರಿಗಳನ್ನು ಪತ್ತೆ ಹಚ್ಚಿ ವಶಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಜನವರಿಯಿಂದ ಏಪ್ರಿಲ್‌ವರೆಗೆ ಜಿಲ್ಲೆಯಲ್ಲಿ ಅನಧಿಕೃತ ಮರಳು ಸಾಗಾಣೆ ಮಾಡಿದ ಒಟ್ಟು ೨೯ ಎಐಐಆರ್ ದಾಖಲಿಸಿ ೧೦.೬೬ ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಸಂಬAಧಿಸಿದ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತ, ಅರಣ್ಯ ಸಂರಕ್ಷಣಾಧಿಕಾರಿ ಕಾಲೋಜ್ ಪಾಟೀಲ್, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಪ್ರಕಾಶ ಕುದರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ಪೂರ್ಣಿಮಾ ಸೇರಿದಂತೆ ಆರ್‌ಟಿಒ ಅಧಿಕಾರಿಗಳು ಮತ್ತು ತಾಲೂಕಿನ ಎಲ್ಲ ತಹಸೀಲ್ದಾರರು ಹಾಗೂ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಕರೆದಿದ್ದ ಜಿಲ್ಲಾ ಮಟ್ಟದ ಮರಳು ಮಾನಿಟರಿಂಗ್ ನಿಯಂತ್ರಣ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲಾ ಮಾತನಾಡಿದರು. ಎಸ್‌ಪಿ ಜಿ.ಸಂಗೀತಾ, ಕಾಲೋಜ್ ಪಾಟೀಲ್, ಶರಣಬಸಪ್ಪ ಕೋಟೆಪ್ಪಗೊಳ, ಪ್ರಕಾಶ ಕುದರಿ, ಪೂರ್ಣಿಮಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net